ಕೋವಿಡ್ JN.1 ರೂಪಾಂತರ: ಅಗತ್ಯ ಮುಂಜಾಗ್ರತಾ ಕ್ರಮ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ
ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.

ಬೆಂಗಳೂರು: ಕೋವಿಡ್ JN.1 ರೂಪಾಂತರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಇದುವರೆಗೂ 34 ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಕುರಿತು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಹೊರಡಿಸಲಾಗಿದೆ.
ಲಭ್ಯವಿರುವ ಮಾಹಿತಿ ಪ್ರಕಾರ JN.1 ಸೋಂಕಿನ ಹರಡುವಿಕೆ ಸಾಮರ್ಥ್ಯ ಹೆಚ್ಚಿರುವುದು ಕಂಡುಬಂದಿದ್ದು ಹೊಸವರ್ಷಾಚರಣೆಯ ಸಂದರ್ಭದಲ್ಲಿ ಜನಸಂದಣಿಯಾಗುವ ಹಾಗು ಒಳಾಂಗಣ ಜನಸಂದಣಿ ಪ್ರದೇಶಗಳಲ್ಲಿ ಮುಂಜಾಗ್ರತವಾಗಿ ಸೂಕ್ತ ಕೋವಿಡ್ ಮಾಸ್ಕ್ ಧರಿಸಲು ಕೋರಲಾಗಿದೆ.
ಅಲ್ಲದೇ, 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸಲಹೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಪ್ರಸ್ತುತ, ರಾಜ್ಯದಲ್ಲಿ ಡಿಸೆಂಬರ್ 26ರವರೆಗೆ 464 ಸಕ್ರಿಯ ಪ್ರಕರಣಗಳ ಪೈಕಿ ಬೆಂಗಳೂರು ನಗರದಲ್ಲಿ 376 ಪ್ರಕರಣಗಳು ವರದಿಯಾಗಿವೆ. ಒಟ್ಟು 74 ಖಚಿತ ಪ್ರಕರಣಗಳಲ್ಲಿ 57 ಪ್ರಕರಣಗಳು ಮತ್ತು 9 ಮರಣ ಪ್ರಕರಣಗಳಲ್ಲಿ 4 ಬೆಂಗಳೂರು ನಗರಕ್ಕೆ ಸೇರಿವೆ.
ಇದನ್ನೂ ಓದಿ: ಕೋವಿಡ್ ಪ್ರಕರಣ ಹೆಚ್ಚಳ: ಹೊಸ ವರ್ಷಾಚರಣೆ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಈ ಎಲ್ಲಾ ಅಂಶಗಳ ಹಿನ್ನೆಲೆಯಲ್ಲಿ ಮುಂಬರುವ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಜನಸಂದಣಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ ಜನಸಂದಣಿಯಾಗುವುದನ್ನು ಗಮನದಲ್ಲಿಟ್ಟುಕೊಂಡು, ಮುಂಜಾಗ್ರತಾ ಕ್ರಮಗಳಾದ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್ ಬಳಸುವುದರ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


