ರಾಜ್ಯ

ಪಣಂಬೂರು ಕಡಲತೀರದಲ್ಲಿ ತೇಲುವ ಸೇತುವೆ ಲೋಕಾರ್ಪಣೆ

ಮಂಗಳೂರಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು. ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ.

ಪಣಂಬೂರು ಕಡಲತೀರದಲ್ಲಿ ತೇಲುವ ಸೇತುವೆ ಲೋಕಾರ್ಪಣೆ
ಪಣಂಬೂರು ಬೀಚ್‌ನಲ್ಲಿ ನಿರ್ಮಾಣಗೊಂಡಿರುವ ತೇಲುವ ಸೇತುವೆ
Published On :

ಮಂಗಳೂರು: ಇಲ್ಲಿನ ಪಣಂಬೂರು ಕಡಲತೀರದಲ್ಲಿ ನೂತನವಾಗಿ ನಿರ್ಮಿಸಲಾದ ತೇಲುವ ಸೇತುವೆಯನ್ನು ರಾಜ್ಯ ವಿಧಾನಸಭಾಧ್ಯಕ್ಷ ಯುಟಿ ಖಾದರ್ ಉದ್ಘಾಟಿಸಿದರು.

ಇತ್ತೀಚಿನ ವರ್ಷಗಳಲ್ಲಿ ಈ ಕಡಲತೀರಕ್ಕೆ ಆಗಮಿಸುತ್ತಿರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದ್ದು, ಈ ತೇಲುವ ಸೇತುವೆಯು ಇದೀಗ ಹೊಸ ಆಕರ್ಷಣೆಯಾಗಿದೆ.

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದು ಮೊದಲ ತೇಲುವ ಸೇತುವೆಯಾಗಿದ್ದು, ಉಡುಪಿಯ ಮಲ್ಪೆ ಕಡಲತೀರದಲ್ಲಿ ಇದಕ್ಕೂ ಮೊದು ತೇಲುವ ಸೇತುವೆಯನ್ನು ನಿರ್ಮಿಸಲಾಗಿದೆ.

ಕದಳಿ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಭಂಡಾರಿ ಬಿಲ್ಡರ್ಸ್ ಘಟಕವು 125 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಿದ್ದು, ಬುಧವಾರ ಉದ್ಘಾಟನೆಗೊಂಡಿದೆ.

ಪ್ರವಾಸಿಗರ ಸುರಕ್ಷತೆಗಾಗಿ ಒಟ್ಟು 12 ಜೀವ ರಕ್ಷಕರು ಮತ್ತು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ತೇಲುವ ಸೇತುವೆಯಲ್ಲಿ ನಿಂತು ಗರಿಷ್ಠ 50 ಜನರು ಸೂರ್ಯಾಸ್ತವನ್ನು ವೀಕ್ಷಿಸಬಹುದು.

ಉದ್ಘಾಟನೆ ಬಳಿಕ ಮಾತನಾಡಿದ ಖಾದರ್, ಬೀಚ್ ಟೂರಿಸಂ ಅಭಿವೃದ್ಧಿಗೆ ಆದ್ಯತೆ ನೀಡಲು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದರು.

ಬೀಚ್ ಅಭಿವೃದ್ಧಿ ಸಮಿತಿಯ ಸದಸ್ಯರಾದ ಲಕ್ಷ್ಮೀಶ ಭಂಡಾರಿ, ರಾಜೇಶ ಹುಕ್ಕೇರಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.