ಕೋಲಾರ: ನವಜಾತ ಹೆಣ್ಣು ಶಿಶುವಿನ ಶವಪತ್ತೆ; ಮೈಮೇಲೆ ಬೀದಿ ನಾಯಿ ಕಚ್ಚಿ ಗಾಯ!
ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.

ಕೋಲಾರ: ವೆಮಗಲ್ ಪೊಲೀಸ್ ವ್ಯಾಪ್ತಿಯ ಅಚ್ಚತನಹಳ್ಳಿ ಗ್ರಾಮದಲ್ಲಿ ಗುರುವಾರ ನವಜಾತ ಹೆಣ್ಣು ಶಿಶುವಿನ ಶವ ಪತ್ತೆಯಾಗಿದೆ. ಶವದ ಮೇಲೆ ನಾಯಿ ಕಚ್ಚಿ ಗಾಯಗಳಾಗಿವೆ.
ಗುರುವಾರ ಮುಂಜಾನೆ ಮಗುವನ್ನು ರಸ್ತೆಯ ಬಳಿಯ ಪೊದೆಗೆ ಎಸೆದಿರಬಹುದು, ನಂತರ ಬೀದಿ ನಾಯಿಗಳು ಅದನ್ನು ರಸ್ತೆಗೆ ಎಳೆದುಕೊಂಡು ಹೋಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶವವನ್ನು ನೋಡಿದ ಅಚ್ಚತನಹಳ್ಳಿ ನಿವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೆಣ್ಣು ಮಗು ಬೇಡ ಎಂಬ ಕಾರಣಕ್ಕೆ ನವಜಾತ ಶಿಶುವನ್ನು ಕುಟುಂಬಸ್ಥರೇ ಕೊಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಎಸ್‌ಎನ್‌ಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ವೆಮಗಲ್ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅಚ್ಚತನಹಳ್ಳಿ ಮುಖ್ಯರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆಗಾಗಿ ಪಡೆದುಕೊಂಡಿದ್ದಾರೆ. ಬುಧವಾರ ಜನಿಸಿದ ಶಿಶುಗಳ ಕುರಿತು ಸ್ಥಳೀಯ ಸರ್ಕಾರಿ ಆರೋಗ್ಯ ಕೇಂದ್ರ, ಖಾಸಗಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಾಹಿತಿ ಕೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


