ರಾಜ್ಯ ಸರ್ಕಾರ ನಿಯಮಗಳನ್ನು ಜಾರಿಗೊಳಿಸಲು ವಿಫಲವಾದಾಗ ಹೋರಾಟ ಅನಿವಾರ್ಯ: ಬಸವರಾಜ ಬೊಮ್ಮಾಯಿ
ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರು: ಕನ್ನಡ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರವು ನಿಯಮಗಳನ್ನು ಸಮರ್ಪಕವಾಗಿ ಜಾರಿ ಮಾಡದಿದ್ದರಿಂದ ಕನ್ನಡ ಪರ ಸಂಘಟನೆಗಳು ಹೋರಾಟದ ಹಾದಿ ಹಿಡಿಯಬೇಕಾಗಿದೆ’ ಎಂದು ಬಿಜೆಪಿ ಹಿರಿಯ ಮುಖಂಡ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನಗರದಲ್ಲಿ ಶುಕ್ರವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನವೀಕೃತ ಕುವೆಂಪು ಸಭಾಂಗಣ ಹಾಗೂ ಕುವೆಂಪು ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಾರ್ಯಕರ್ತರನ್ನು ಬೆಂಬಲಿಸುವುದು ಇಂದಿನ ಅಗತ್ಯವಾಗಿದೆ, ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಮತ್ತಿತರರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕನ್ನಡಪರ ಹೋರಾಟಗಾರರ ಮೇಲಿನ ಸುಮಾರು 2 ಸಾವಿರ ಪ್ರಕರಣಗಳನ್ನು ವಾಪಸ್ ಪಡೆಯಲಾಗಿತ್ತು. ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕೆಂಬ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡದಿರುವುದರಿಂದ ಈ ಪರಿಸ್ಥಿತಿ ಬಂದಿದೆ. ಆಡಳಿತಗಾರರಿಗೆ ಸೂಕ್ಷ್ಮತೆ ಇರಬೇಕು ಎಂದು ಹೇಳಿದರು.
ನಮ್ಮ ಸರ್ಕಾರದ ಅವಧಿಯಲ್ಲಿ ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ಮಸೂದೆ-2022 ಜಾರಿಗೊಳಿಸಿದ್ದೇವು. ಇದನ್ನು ಹಾಲಿ ಸರ್ಕಾರ ಅನುಷ್ಠಾನ ಮಾಡದಿದ್ದರಿಂದ ಕನ್ನಡಪರ ಹೋರಾಟಗಾರರು ಪ್ರತಿಭಟನೆಗೆ ಇಳಿದಿದ್ದಾರೆ. ಕನ್ನಡ ನಿತ್ಯ ನಿರಂತರ ಆಗಬೇಕಾದರೆ ಕನ್ನಡಡಿಗರು ಜಾಗೃತರಾಗಿರಬೇಕು ಎಂದು ತಿಳಿಸಿದರು. ಕನ್ನಡ ನಾಮಫಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸದ ಕಾರಣ ಪ್ರಸ್ತುತ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


