ರಾಜ್ಯ

ಬೆಂಗಳೂರು ಪ್ರೆಸ್ ಕ್ಲಬ್: ಡಿಸಿಎಂ ಡಿಕೆ ಶಿವಕುಮಾರ್ ಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ "ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಗೊಳಿಸಿದರು.

ಬೆಂಗಳೂರು ಪ್ರೆಸ್ ಕ್ಲಬ್: ಡಿಸಿಎಂ ಡಿಕೆ ಶಿವಕುಮಾರ್ ಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ
ಡಿಸಿಎಂ ಡಿಕೆ ಶಿವಕುಮಾರ್ ಗೆ ಪ್ರಶಸ್ತಿ ಪ್ರದಾನ ಸಮಾರಂಭದ ಚಿತ್ರ
Published On :

ಬೆಂಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ "ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿಯನ್ನು ಬಿಡುಗಡೆ ಗೊಳಿಸಿದರು. 

 ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಲಾಯಿತು. ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವರಾದ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ  ವಿಶೇಷ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು. ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ಶಿವರಾಜ್ ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದರು. 

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಡ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ತಿಳಿಸಿದರು. 

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಪೂರ್ವದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು. ನನ್ನನ್ನು ಜೆಡಿಎಸ್ ನಿಂದ ಉಚ್ಛಾಟಣೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.