ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯ ದಂತ ವೈದ್ಯೆ ಆತ್ಮಹತ್ಯೆಗೆ ಶರಣು!
ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರಪ್ರದೇಶದ ಲಖನೌ ಮೂಲದ ಪ್ರಿಯಾಂನ್ಷಿ 25ರಂದು ಬೆಂಗಳೂರಿನ ಸಂಜಯನಗರದಲ್ಲಿ ಆತ್ಮಹತ್ಯೆ ಮಾಡಿದ್ದಾರೆ. ಪ್ರಿಯಾಂನ್ಷಿ ತ್ರಿಪಾಠಿ ವೈದ್ಯ ಸುಮಿತ್ ಎಂಬಾತನನ್ನು ಪ್ರೀತಿಸುತ್ತಿದ್ದು ಅದನ್ನು ಪ್ರಿಯಕರನ ಮುಂದೆ ಹೇಳಿಕೊಂಡಿದ್ದಾಳೆ. ಇದಕ್ಕೆ ಸುಮಿತ್ ನಿರಾಕರಿಸಿದ್ದು ಈ ಹಿನ್ನೆಲೆಯಲ್ಲಿ ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಈ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಿಯಾಂನ್ಷಿ ತಂದೆ ದೂರು ದಾಖಲಿಸಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನನ್ನ ಮಗಳಿಗೆ ಸುಮಿತ್ ಮದ್ಯಪಾನ ಮಾಡುವಂತೆ, ಸಿಗರೇಟ್ ಸೇದುವಂತೆ ಒತ್ತಾಯಿಸುತ್ತಾ ಹಿಂಸೆ ಕೊಡುತ್ತಿದ್ದನು. ಇದರ ಜೊತೆಗೆ ಹಣಕ್ಕಾಗಿ ಒತ್ತಾಯಿಸಿದ್ದನು. ಈ ವಿಷಯವನ್ನು ಮಗಳು ಹೇಳಿದಾಗ ನಾನು ಆತನಿಗೆ ಕರೆ ಮಾಡಿ ತೊಂದರೆ ಕೊಂಡದಂತೆ ಮನವಿ ಮಾಡಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಆದರೆ ಈ ಬಗ್ಗೆ ತನಿಖೆಕೈಗೊಂಡಿದ್ದ ಪೊಲೀಸರಿಗೆ ಕೆಲ ಮಾಹಿತಿ ಸಿಕ್ಕಿದೆ. ಅದರಂತೆ ಯುವತಿಯೇ ಆತನನ್ನ ಪ್ರೀತಿಸುತ್ತಿದ್ದು ಆತ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ದೂರು ವಾಪಸ್ ಪಡೆಯುವುದಾಗಿ ಪ್ರಿಯಾಂನ್ಷಿ ತಂದೆ ಕೇಳಿದ್ದಾರೆ. ಆದರೆ ಪ್ರಕರಣದ ತನಿಖೆ ಹಿನ್ನಲೆ ಎಫ್ಐಆರ್ ದಾಖಲಿಸಿದ್ದ ಕಾರಣ ಪೊಲೀಸರು ಯುವತಿ ಪ್ರೇಮವೈಫಲ್ಯ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


