ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು: ಸಚಿವ ಹಾಲಪ್ಪ ಆಚಾರ್
ಅಂಗನವಾಡಿ ಕಾರ್ಯಕರ್ತೆಯರ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಭರವಸೆ ನೀಡಿದ್ದಾರೆ.

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಎಲ್ಲಾ ಬೇಡಿಕೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು ಭರವಸೆ ನೀಡಿದ್ದಾರೆ.
ಗುರುವಾರ ಬೆಳಗ್ಗೆ ಬೆಂಗಳೂರಿನಲ್ಲಿ ಮುಷ್ಕರ ನಿರತ ಅಂಗನವಾಡಿ ನೌಕರರ ಸಂಘದ ಮುಖಂಡರೊಂದಿಗೆ ಆಚಾರ್ ಹಾಗೂ ಅಧಿಕಾರಿಗಳು ಸಭೆ ನಡೆಸಿದರು. ಈ ವೇಳೆ ಬೇಡಿಕೆಗಳನ್ನು ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು.
ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು 10 ದಿನಗಳ ಕಾಲ ನಡೆಸಿದ ಪ್ರತಿಭಟನೆ ಬಳಿಕ ಸಭೆ ನಡೆಸಲಾಯಿತು.
ಸಭೆಯ ನಂತರ ಮಾತನಾಡಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಚ್ಯುಟಿ ನೀಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದ್ದು, ಶೀಘ್ರದಲ್ಲಿಯೇ ಈ ಕುರಿತು ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಕನಿಷ್ಠ ವೇತನ ಜಾರಿ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶೀಘ್ರದಲ್ಲೇ ಭೇಟಿ ಮಾಡಲಾಗುವುದು. ‘ಮಿನಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳುವ ಜತೆಗೆ ರಾಜ್ಯದ ಎಲ್ಲ ಜಿಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


