ಸಕಲೇಶಪುರದಲ್ಲಿ ಅಪ್ರಾಪ್ತೆ ಆತ್ಮಹತ್ಯೆ: ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರ ಬಂಧನ
ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು.

ಸಕಲೇಶಪುರ: ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲೂಕಿನ ಯಸಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಮೃತ ಬಾಲಕಿಯ ಸಂಬಂಧಿಕರೆಂದು ಹೇಳಲಾದ 23 ವರ್ಷದ ಲೋಕೇಶ್ ಮತ್ತು ಇನ್ನಿಬ್ಬರು ಅಪ್ರಾಪ್ತ ಬಾಲಕರನ್ನು ಪೊಲೀಸರು ಬಂಧಿಸಿದ್ದಾರೆ.
ಮೃತ ಬಾಲಕಿ ಒಂದು ದಿನ ಅವರೊಂದಿಗೆ ಕಳೆದು ಮನೆಗೆ ಹಿಂದಿರುಗಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆದರೆ ಆಕೆಯ ಮೇಲೆ ಯಾವುದೇ ಲೈಂಗಿಕ ಕಿರುಕುಳದ ಲಕ್ಷಣಗಳಿಲ್ಲ ಎಂದು ಮರಣೋತ್ತರ ವರದಿ ಹೇಳುತ್ತದೆ ಎಂದು ಎಸ್ಪಿ ಹೇಳಿದ್ದಾರೆ.
ಮೃತ ಪೋಷಕರ ಪ್ರಕಾರ, ತಮ್ಮ ಮಗಳು ನಿಗೂಢ ಸ್ಥಿತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


