ರಾಜ್ಯ

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಶುಕ್ರವಾರ ಮಧ್ಯರಾತ್ರಿ ನಿಧನರಾಗಿದ್ದಾರೆ.

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಸಾಯಿದತ್ತ
Published On :

ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ಶುಕ್ರವಾರ ಮಧ್ಯರಾತ್ರಿ ನಿಧನರಾಗಿದ್ದಾರೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಜೆ.ಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಇವರು ಜಾಹೀರಾತು ಮಾಫಿಯಾ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಇವರು ಶಾಸಕ ಗರುಡಾಚಾರ್ ಅವರ ಆಪ್ತ ಸಹಾಯಕರಾಗಿದ್ದರು.

ಇಂದು ದೇವೆಗೌಡ ಪೆಟ್ರೋಲ್ ಬಂಕ್ ಬಳಿಯಿರುವ ಇವರ ಮನೆಯಲ್ಲಿ ಮಧ್ಯಾಹ್ನ 2-30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬನಶಂಕರಿ ಅಥವಾ ಚಾಮರಾಜಪೇಟೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.