ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ, 1,500 ವಿದ್ಯಾರ್ಥಿಗಳ ರವಾನಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫೆ.6ರಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನಲ್ಲಿ ಇಂಡಿಯಾ ಎನರ್ಜಿ ವೀಕ್ 2023ಕ್ಕೆ ಚಾಲನೆ ನೀಡಲಿದ್ದಾರೆ. ಇದರ ಜೊತೆಗೆ ಇ20 ಇಂಧನ ಲೋಕಾರ್ಪಣೆ, ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ಸೇರಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ರ್ಯಾಲಿ ಹಿನ್ನೆಲೆಯಲ್ಲಿ 1000-1,500 ವಿದ್ಯಾರ್ಥಿಗಳ ರವಾನಿಸುವಂತೆ ನಗರದ 6 ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.
ನಾಳೆ ಬೆಂಗಳೂರಿಗೆ ಆಗಮಿಸಿರುವ ಮೋದಿಯವರು ಗ್ರೀನ್ ಮೊಬಿಲಿಟಿ ರ್ಯಾಲಿಗೆ ಚಾಲನೆ ನೀಡಲಿದ್ದಾರೆ. ಈ ರ್ಯಾಲಿಯು ಹಸಿರು ಇಂಧನ ಮೂಲಗಳ ಮೇಲೆ ಚಲಿಸುವ ವಾಹನಗಳ ಭಾಗವಹಿಸುವಿಕೆಗೆ ಸಾಕ್ಷಿಯಾಗಲಿದೆ ಮತ್ತು ಹಸಿರು ಇಂಧನಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಹಾಯ ಮಾಡುತ್ತದೆ.
ರ್ಯಾಲಿಯು 42 ಕಿ.ಮೀ ರಸ್ತೆಯವರೆಗೂ ನಡೆಯಲಿದ್ದು, ರ್ಯಾಲಿಗೆ 1,000-1,5000 ವಿದ್ಯಾರ್ಥಿಗಳನ್ನು ಕಳುಹಿಸುವಂತೆ ವಿವಿಗಳಿಗೆ ಶಿಕ್ಷಣ ಇಲಾಖೆ ಮನವಿ ಮಾಡಿಕೊಂಡಿದೆ ಎಂದು ವರದಿಗಳು ತಿಳಿಸಿವೆ.
ರ್ಯಾಲಿಯು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಿಂದ ಆರಂಭಗೊಂಡು ನೀಲಕಂಠ ಪಾರ್ಕಿಂಗ್ ಮೈದಾನ/ಮಾದಾವರ ಮೈದಾನದಲ್ಲಿ ಕೊನೆಗೊಳ್ಳಲಿದೆ.
ಈ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಳುಹಿಸಲು ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ನೃಪತುಂಗ ವಿಶ್ವವಿದ್ಯಾಲಯ ಮತ್ತು ಯುವಿಸಿಇಗೆ ಸೂಚಿಸಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


