ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು; ಬೆಂಗಳೂರಿನಲ್ಲಿ ಘಟನೆ!
ಚರಂಡಿ ದುರಸ್ತಿ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಚರಂಡಿ ದುರಸ್ತಿ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ಈ ಘೋರ ಘಟನೆ ಸಂಭವಿಸಿದ್ದು, ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.
ಮೂಲಗಳ ಪ್ರಕಾರ ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಪಟ್ಟವರಾಗಿದ್ದಾರೆ. ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್‌ಮೆಂಟ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.
ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತದೇಹಗಳನ್ನುಇರಿಸಲಾಗಿದ್ದು, ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


