ಬಿಬಿಎಂಪಿ ವ್ಯಾಪ್ತಿಯಲ್ಲಿ 108 'ನಮ್ಮ ಕ್ಲಿನಿಕ್' ಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 108 'ನಮ್ಮ ಕ್ಲಿನಿಕ್' ಗಳಿಗೆ ಮಂಗಳವಾರ ಚಾಲನೆ ದೊರೆಯಿತು. ಬಿಬಿಎಂಪಿ ಸಹಯೋಗದಲ್ಲಿ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ನಮ್ಮ ಕ್ಲಿನಿಕ್” ಉದ್ಘಾಟಿಸಿದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಅಬಕಾರಿ ಸಚಿವ ಗೋಪಾಲಯ್ಯ ಮತ್ತಿತರರು ಉಪಸ್ಥಿತರಿದ್ದರು.
ನಂತರ ಮಾತನಾಡಿದ ಮುಖ್ಯಮಂತ್ರಿ, "ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಉತ್ತಮ ವೈದ್ಯಕೀಯ ಸೌಲಭ್ಯ ನೀಡುವ ಸಲುವಾಗಿ ಸರ್ಕಾರ 108 "ನಮ್ಮ ಕ್ಲಿನಿಕ್" ಗಳನ್ನು ಆರಂಭಿಸಿದೆ. ಬರುವ ದಿನಗಳಲ್ಲಿ ನಮ್ಮ ಕ್ಲಿನಿಕ್ ಗಳ ಸಂಖ್ಯೆಗಳನ್ನು ಹೆಚ್ಚಿಸಲಾಗುವುದು, ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ"ಎಂಬುದು ನಮ್ಮ ಸರ್ಕಾರದ ಸಂಕಲ್ಪವಾಗಿದೆ ಎಂದರು.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮಾತನಾಡಿ, ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ರೂ. 150 ಕೋಟಿ ವೆಚ್ಚದಲ್ಲಿ 438 ನಮ್ಮ ಕ್ಲಿನಿಕ್ ಸ್ಥಾಪಿಸಲಾಗುತ್ತಿದ್ದು, ಬೆಂಗಳೂರಿನಲ್ಲಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಸ್ಥಾಪನೆಗೊಳ್ಳುತ್ತಿವೆ.
ಈಗಾಗಲೇ ರಾಜ್ಯಾದ್ಯಂತ 100 ನಮ್ಮ ಕ್ಲಿನಿಕ್ ಗಳಿಗೆ ಚಾಲನೆ ದೊರೆತಿದ್ದು, ಇಂದು ಬೆಂಗಳೂರಿನಲ್ಲಿ 108 ನಮ್ಮ ಕ್ಲಿನಿಕ್‌ಗಳಿಗೆ ಚಾಲನೆ ದೊರೆತಿದೆ ಎಂದು ತಿಳಿಸಿದರು.
ನಗರ ಪ್ರದೇಶದಲ್ಲಿ 50-60 ಸಾವಿರ ಜನಸಂಖ್ಯೆಗೆ ಒಂದರಂತೆ ಕ್ಲಿನಿಕ್‌ಗಳು ಕಾರ್ಯ ನಿರ್ವಹಿಸುತ್ತಿದ್ದವು. ಆದರೆ ಈಗ, 'ನಮ್ಮ ಕ್ಲಿನಿಕ್' ಯೋಜನೆಯಿಂದಾಗಿ 15-20 ಸಾವಿರ ಜನಸಂಖ್ಯೆಗೆ ಒಂದರಂತೆ ಕ್ಲಿನಿಕ್‌ಗಳನ್ನು ಸ್ಥಾಪಿಸಲಾಗುತ್ತಿದೆ.ಜನಪರವಾದ ಆಡಳಿತವೇ ನಮ್ಮ ಸರ್ಕಾರದ ಗುರಿ ಎಂದರು.
ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಡಾ. ಕೆ. ಸುಧಾಕರ್, ನಮ್ಮ ಕ್ಲಿನಿಕ್ ಗೆ ಭೇಟಿ ನೀಡಿ, ಸಲಕರಣೆಗಳು, ಸೌಲಭ್ಯಗಳನ್ನು ವೀಕ್ಷಿಸಿದರು. ವೈದ್ಯರಿಂದ ಮಾಹಿತಿ ಪಡೆದುಕೊಂಡು ಅಗತ್ಯ, ಸಲಹೆ, ಸೂಚನೆಗಳನ್ನು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


