ಟರ್ಕಿ, ಸಿರಿಯಾದಲ್ಲಿ ಭೂಕಂಪ: ಕನ್ನಡಿಗರ ಮಾಹಿತಿಗಾಗಿ ಶೀಘ್ರದಲ್ಲೇ ಸಹಾಯವಾಣಿ ಸ್ಥಾಪನೆ- ಸಿಎಂ ಬೊಮ್ಮಾಯಿ
ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು: ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಅಲ್ಲಿರುವ ಭಾರತೀಯರು ಹಾಗೂ ಕನ್ನಡಿಗರ ಮಾಹಿತಿಗಾಗಿ ವಿಶೇಷ ಸಹಾಯವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯ ಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಟರ್ಕಿ-ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 5 ಸಾವಿರಕ್ಕೆ ಏರಿಕೆ: ಸಾವಿರಾರು ಕಟ್ಟಡ ನೆಲಸಮ, ರಕ್ಷಣಾ ಕಾರ್ಯಕ್ಕೆ ಅಡಚಣೆ
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದ್ದು, ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ ಎಂದರು.
ಸೋಮವಾರ ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 5,000ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಕಟ್ಟಡಗಳು ಧ್ವಂಸಗೊಂಡಿವೆ. ಇದು ಟರ್ಕಿಯ ಆಗ್ನೇಯ ಪ್ರಾಂತ್ಯದ ಕಹ್ರಮನ್ಮರಸ್‌ನಲ್ಲಿ ಕೇಂದ್ರೀಕೃತವಾಗಿತ್ತು . ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಂಡ ಮಂಗಳವಾರ ಟರ್ಕಿಗೆ ತೆರಳಿದ್ದು, ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ನೆರವಾಗಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


