ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರ ಸಾವು: ಸರ್ಕಾರದ ವಿರುದ್ಧ ನಾಗರೀಕರ ಪ್ರತಿಭಟನೆ
ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮಲ ಹೊರುವ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾಗರೀಕ ಹೋರಾಟಗಾರರು ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಪ್ರೆಸ್ಟೀಜ್ ಫಾಲ್ಕನ್ ಸಿಟಿ ಅಪಾರ್ಟ್‌ಮೆಂಟ್‌ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದ ಘಟನೆ ವರದಿಯಾಗಿದ್ದು, ಮಲ ಹೊರುವ ಪದ್ಧತಿಯನ್ನು ತೊಡೆದು ಹಾಕುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ನಾಗರೀಕ ಹೋರಾಟಗಾರರು ಮಂಗಳವಾರ ಪ್ರತಿಭಟನೆ ನಡೆಸಿದರು.
ತುಮಕೂರಿನ ಕೊರಟಗೆರೆ ತಾಲ್ಲೂಕಿನ ಗೊಲ್ಲರಹಟ್ಟಿ ನಿವಾಸಿ ರವಿಕುಮಾರ್ (29) ಮತ್ತು ಒಡಿಶಾದ ದಿಲೀಪ್ ಕುಮಾರ್ ಜನಾ (25) ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ವಚ್ಛಗೊಳಿಸುವ ವೇಳೆ ಮೃತಪಟ್ಟಿದ್ದರು.
ಬಯೋ ಸೆಂಟರ್ ಇಂಡಿಯಾದ ಕಂಪನಿಯ ನೌಕರರಾಗಿದ್ದ ಈ ಇಬ್ಬರನ್ನು ಕಂಪನಿ ಪ್ರೆಸ್ಟೀಜ್ ಪಾಳ್ಕನ್ ಸಿಟಿ ಅಪಾರ್ಟ್'ಮೆಂಟ್'ನ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಕೆಲಸಕ್ಕೆ ನಿಯೋಜಿಸಿತ್ತು. ಶನಿವಾರ ಮಧ್ಯಾಹ್ನ 2 ಗಂಟೆಗೆ ಇಬ್ಬರು ಕಾರ್ಮಿಕರು ಎಸ್'ಟಿಪಿ ಬಳಿ ಬಂದು ಕೆಲಸ ಮಾಡುತ್ತಿದ್ದರು. ಈ ವೇಳೆ ಉಸಿರುಗಟ್ಟಿ ಅಥವಾ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನೆ ಖಂಡಿಸಿ ನಾಗರೀಕ ಹೋರಾಟಗಾರರು ಮೃತರಿಗೆ ನ್ಯಾಯ ಒದಗಿಸುವಂತೆ ಮಂಗಳವಾರ ಪ್ರತಿಭಟನೆ ನಡೆಸಿದರು.
ರವಿ ಮತ್ತು ದಿಲೀಪ್ ಕುಟುಂಬಗಳಿಗೆ ಪರಿಹಾರ ನೀಡುವಂತೆ ಅಪಾರ್ಟ್‌ಮೆಂಟ್ ಎದುರು ಹಲವಾರು ನಾಗರಿಕರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. ಅಲ್ಲದೆ, ಮಲ ಹೊರುವ ಪದ್ಧತಿಯನ್ನು ಇನ್ನೂ ಮುಂದುವರೆಸಿರುವವರನ್ನು ಘಟನೆಯ ಹೊಣೆಗಾರರನ್ನಾಗಿ ಮಾಡಬೇಕೆಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


