ರಾಜ್ಯ

ನಾಳೆ ಮಂಗಳೂರಿಗೆ ಅಮಿತ್ ಶಾ; ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದು

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಘಟಕ...

ನಾಳೆ ಮಂಗಳೂರಿಗೆ ಅಮಿತ್ ಶಾ; ಭದ್ರತಾ ದೃಷ್ಟಿಯಿಂದ ರೋಡ್ ಶೋ ರದ್ದು
ಅಮಿತ್ ಶಾ
Published On :

ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಮಂಗಳೂರಿಗೆ ಆಗಮಿಸುತ್ತಿದ್ದು, ಭದ್ರತಾ ದೃಷ್ಟಿಯಿಂದ ಮಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ರೋಡ್ ಶೋ ರದ್ದುಗೊಳಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ ಸ್ಥಳೀಯ ಘಟಕ ಶುಕ್ರವಾರ ತಿಳಿಸಿದೆ.

ಹಗಲಿನಲ್ಲಿ ಪುತ್ತೂರು ತಾಲೂಕಿನಲ್ಲಿ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿರುವ ಅಮಿ ಖಾ, ಸಂಜೆಯ ವೇಳೆಗೆ ಮಂಗಳೂರಿಗೆ ಆಗಮಿಸುವ ಸಾಧ್ಯತೆ ಇದೆ.

ನಗರದಲ್ಲಿ ಕೇಂದ್ರ ಗೃಹ ಸಚಿವರ ರೋಡ್ ಶೋ ನಡೆಸಲು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಭದ್ರತೆಯ ಕಾರಣದಿಂದ ರದ್ದುಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರಿನ ಕೆಂಜಾರು ಶ್ರೀದೇವಿ ಕಾಲೇಜಿನಲ್ಲಿ ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಶಾ ಭಾಗವಹಿಸಲಿದ್ದಾರೆ.

ಸಂಜೆ ಪುತ್ತೂರಿನಲ್ಲಿ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಮಾರಂಭವನ್ನು ಬಿಜೆಪಿಯ ಹಿರಿಯ ಮುಖಂಡರು ಉದ್ಘಾಟಿಸಲಿದ್ದಾರೆ.

ಧರ್ಮಶ್ರೀ ಪ್ರತಿಷ್ಠಾನ ನಿರ್ಮಿಸಿರುವ ಭಾರತ ಮಾತಾ ಮಂದಿರವನ್ನು ಅಮಿತ್ ಶಾ ಉದ್ಘಾಟಿಸಲಿದ್ದು, ಬಳಿಕ ಹನುಮಗಿರಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.