ಬಜೆಟ್'ಗೆ ಬಿಬಿಎಂಪಿ ಸಿದ್ಧತೆ: ಸಚಿವರು, ಶಾಸಕರು, ಉನ್ನತಾಧಿಕಾರಿಗಳೊಂದಿಗೆ ಸಚಿವ ಅಶ್ವತ್ಥ್ ನಾರಾಯಣ್ ಸಭೆ
2023-24ರ ಬಿಬಿಎಂಪಿ ಬಜೆಟ್ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ನಗರದ ಶಾಸಕರು, ಎಂಎಲ್‌ಸಿಗಳು ಮತ್ತು ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.

ಬೆಂಗಳೂರು: 2023-24ರ ಬಿಬಿಎಂಪಿ ಬಜೆಟ್ ಕುರಿತು ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರು ನಗರದ ಶಾಸಕರು, ಎಂಎಲ್‌ಸಿಗಳು ಮತ್ತು ಬಿಬಿಎಂಪಿ ಉನ್ನತ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದರು.
ಸಭೆಯಲ್ಲಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು, ಬಜೆಟ್‌ನಲ್ಲಿ ನಗರದ ಸರ್ವತೋಮುಖ ಅಭಿವೃದ್ಧಿಗೆ ಯೋಜನೆಗಳನ್ನು ಅಳವಡಿಸಿಕೊಳ್ಳಲು ಸಲಹೆಗಳ ನೀಡುವಂತೆ ಜನ ಪ್ರತಿನಿಧಿಗಳ ಬಳಿ ಮನವಿ ಮಾಡಿಕೊಂಡರು.
ಬೀದಿ ದೀಪ, ಉದ್ಯಾನ, ರಾಜಕಾಲುವೆ ನಿರ್ವಹಣೆ, ಭದ್ರತಾ ಸಿಬ್ಬಂದಿ ನಿಯೋಜನೆ, ಬೀದಿಬದಿ ಕಸ ಸುರಿಯುವ ತಾಣಗಳ ನಿರ್ಮೂಲನೆ, ಲ್ಯಾಪ್‌ಟಾಪ್, ಹೊಲಿಗೆ ಯಂತ್ರ, ಒಂಟಿ ಮನೆ, ರಸ್ತೆ ವಿಸ್ತರಣೆ, ಪ್ರತಿ ವಾರ್ಡ್‌ಗೆ ಸಾರ್ವಜನಿಕ ಕಾಮಗಾರಿಗಳಿಗೆ ಅನುದಾನ, ಭಿಕ್ಷಾಟನೆ, ಗ್ರಂಥಾಲಯ ಹಾಗೂ ಡಲ್ಟ್ ಸೆಸ್ ವಿನಿಯೋಗ, ಕಾಮಗಾರಿಗಳನ್ನು ಪೂರ್ಣಗೊಳಿಸಲು ಆದ್ಯತೆ ನೀಡುವ ವಿಷಯಗಳು ಸಭೆಯಲ್ಲಿ ಚರ್ಚೆಯಾದವು.
ಆರೋಗ್ಯ ಸಿಬ್ಬಂದಿ ನಿಯೋಜನೆ, ಶಿಕ್ಷಣ, ಕಲ್ಯಾಣ ಕಾರ್ಯಕ್ರಮ, ಕೆರೆ, ಪಾದಚಾರಿ ಮಾರ್ಗ, ರಸ್ತೆ, ಬೀದಿದೀಪ, ಉದ್ಯಾನಗಳ ನಿರ್ವಹಣೆಗೆ ಬಿಬಿಎಂಪಿ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


