ನಿರ್ಗತಿಕ ವರ್ಗದವರ ಸಮಸ್ಯೆಗಳ ಪರಿಹರಿಸಲು ಬಜೆಟ್ ನಲ್ಲಿ ವಿವಿಧ ಯೋಜನೆಗಳ ಘೋಷಣೆ: ಸಿಎಂ ಬೊಮ್ಮಾಯಿ
2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧ್ವನಿ ಇಲ್ಲದ ಮತ್ತು ನಿರ್ಗತಿಕ ವರ್ಗದವರ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.

ಬೆಂಗಳೂರು: 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಧ್ವನಿ ಇಲ್ಲದ ಮತ್ತು ನಿರ್ಗತಿಕ ವರ್ಗದವರ ಸಮಸ್ಯೆಗಳನ್ನು ಪರಿಹರಿಸಲು ವಿವಿಧ ಯೋಜನೆಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರು, ರೈತರು, ದಲಿತರು ಮತ್ತು ಬಡ ಜನರ ಸಂಕಷ್ಟಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ಸಿದ್ಧಪಡಿಸುವುದಾಗಿ ಭರವಸೆ ನೀಡಿದರು.
ಎಲ್ಲಾ ಸಮುದಾಯಗಳಿಗೆ ಆರೋಗ್ಯ ಮತ್ತು ಶಿಕ್ಷಣ, ಉದ್ಯೋಗಗಳ ಸೃಷ್ಟಿ ಮತ್ತು ಎಲ್ಲರನ್ನೂ ಒಳಗೊಂಡ ಬೆಳವಣಿಗೆಗೆ ಬಜೆಟ್‌ನಲ್ಲಿ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕೇಂದ್ರ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


