ರಾಜ್ಯ

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ
ಅಪಘಾತದಲ್ಲಿ ನವದಂಪತಿ ಸಾವು
Published On :

ತಮುಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ. 

ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ. 

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.