ಬೆಂಗಳೂರು: ಅರಮನೆ ಮೈದಾನದಲ್ಲಿ ಅಗ್ನಿ ಅವಘಡ; 3 ಕಾರು ಬೆಂಕಿಗಾಹುತಿ
ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 3 ಕಾರುಗಳು ಬೆಂಕಿಗಾಹುತಿಯಾದ ಘಟನೆ ಭಾನುವಾರ ನಡೆದಿದೆ.
ಭಾನುವಾರ ಮಧ್ಯಾಹ್ನ ಅರಮನೆ ಮೈದಾನದ ಬಳಿಯ ಪಾರ್ಕಿಂಗ್ ಸ್ಥಳದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಕಾರುಗಳು ಸುಟ್ಟು ಭಸ್ಮವಾಗಿದ್ದು ಇನ್ನೊಂದು ಕಾರು ಭಾಗಶಃ ಹಾನಿಯಾಗಿದೆ.
ಅರಮನೆ ಮೈದಾನದಲ್ಲಿರುವ ಕಿಂಗ್ಸ್ ಕೋರ್ಟ್‌ಗೆ ಹೊಂದಿಕೊಂಡಿರುವ ಪಾರ್ಕಿಂಗ್ ಸ್ಥಳದಲ್ಲಿ ಮಧ್ಯಾಹ್ನ 2.15 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
"ಪಾರ್ಕಿಂಗ್ ಸ್ಥಳದಲ್ಲಿ ತ್ಯಾಜ್ಯ ವಸ್ತುಗಳು ಮತ್ತು ಒಣ ಎಲೆಗಳು ಇದ್ದ ಜಾಗದಲ್ಲಿ ಬೆಂಕಿ ಹೊತ್ತಿದ್ದು, ಬಳಿಕ ಬೆಂಕಿ ಮೂರು ಕಾರುಗಳಿಗೆ ವ್ಯಾಪಿಸಿದೆ. ಮಹೀಂದ್ರಾ ಎಕ್ಸ್‌ಯುವಿ ಮತ್ತು ಮಾರುತಿ ಎರ್ಟಿಗಾ ಕಾರುಗಳು ಸಂಪೂರ್ಣವಾಗಿ ಸುಟ್ಟುಹೋಗಿದೆ ಮತ್ತು ಹ್ಯುಂಡೈ ಕ್ರೆಟಾ ಸುಮಾರು 25% ನಷ್ಟು ಹಾನಿಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಬೈಕ್ ನಿಯಂತ್ರಣ ತಪ್ಪಿ ಅಪಘಾತ, ಯುವಕ ಸಾವು
ಸಿಗರೇಟ್ ತುಂಡಿನಿಂದ ಬೆಂಕಿ
ಇನ್ನು ಇಲ್ಲಿ ಯಾರೋ ಸೇದಿ ಬಿಸಾಡಿ ಹೋದ ಸಿಗರೇಟ್ ತುಂಡಿನಿಂದ ಒಣ ತ್ಯಾಜ್ಯಕ್ಕೆ ಬೆಂಕಿ ಹೊತ್ತಿದ್ದು, ಅದು ಕಾರುಗಳಿಗೆ ವ್ಯಾಪಿಸಿರಬಹುದು ಎಂದು ಶಂಕಿಸಲಾಗಿದೆ. ಆದರೂ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸದಾಶಿವನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


