ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈಗೆ ತೆರಳುತ್ತಿದ್ದ ಪ್ರಯಾಣಿಕರಿಂದ 2.6 ಕೋಟಿ ರೂ. ಮೌಲ್ಯದ ವಜ್ರ ವಶ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಇಬ್ಬರು ಪ್ರಯಾಣಿಕರಿಂದ 2.6 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಎಂಐಎ) ಇಬ್ಬರು ಪ್ರಯಾಣಿಕರಿಂದ 2.6 ಕೋಟಿ ರೂಪಾಯಿ ಮೌಲ್ಯದ ವಜ್ರಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ.
ಶನಿವಾರ ದುಬೈಗೆ ಪ್ರಯಾಣ ಬೆಳೆಸಲು ಮುಂದಾಗಿದ್ದ ಭಟ್ಕಳದ ಅನಸ್ ಮತ್ತು ಅಮರ್ ಎಂಬ ಇಬ್ಬರು ಪ್ರಯಾಣಿಕರಿಂದ ವಜ್ರಗಳನ್ನು ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್ ಸಿಬ್ಬಂದಿಯ ಸಹಾಯದಿಂದ ಡಿಆರ್‌ಐ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಜ್ರ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಐಆರ್‌ಐ ಅಧಿಕಾರಿಗಳು, ವಲಸೆ ಕೌಂಟರ್‌ನಲ್ಲಿ ನಡೆದ ತೀವ್ರ ದೈಹಿಕ ತಪಾಸಣೆಯ ಸಮಯದಲ್ಲಿ ಪ್ರಯಾಣಿಕರೊಬ್ಬರ ಶೂಗಳಲ್ಲಿ ಅಡಗಿಸಿಟ್ಟಿದ್ದ ಎರಡು ಪ್ಯಾಕೆಟ್ ವಜ್ರಗಳು ಪತ್ತೆಯಾಗಿವೆ.
ಹೆಚ್ಚಿನ ತನಿಖೆಗಾಗಿ ಸಿಐಎಸ್‌ಎಫ್ ಸಿಬ್ಬಂದಿ ಇಬ್ಬರು ಪ್ರಯಾಣಿಕರನ್ನು ಡಿಆರ್‌ಐ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


