ಸಂಚಾರ ಉಲ್ಲಂಘನೆ ಶೇ.50 ರಿಯಾಯಿತಿ: 2 ವಾರ ವಿಸ್ತರಣೆ ಸಾಧ್ಯತೆ, ನಾಳೆ ಅಧಿಕೃತ ಘೋಷಣೆ
ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಬಗ್ಗೆ ನಾಳೆ ಅಧಿಕೃತ ಘೋಷಣೆ ಹೊರಬೀಳಲಿದೆ.
ಬೆಂಗಳೂರಿನಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಸಂಚಾರ ನಿಯಮ ಉಲ್ಲಂಘನೆಯ ಶೇ.50 ರಿಯಾಯಿತಿಯನ್ನು ಮತ್ತೆ ಎರಡು ವಾರ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಈ ಕುರಿತು ನಾಳೆ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಟ್ರಾಫಿಕ್ ದಂಡ ಶೇ.50 ರಿಯಾಯಿತಿ ವಿಸ್ತರಿಸಲು ಜನಸಾಮಾನ್ಯರಿಂದ ಬೇಡಿಕೆ ಇದೆ. ಸಾರಿಗೆ ಇಲಾಖೆಯಿಂದಲೂ ಈ ಬಗ್ಗೆ ಪತ್ರ ಬಂದಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಅವರು ಕೂಡಾ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ನಾಳೆ ಈ ಬಗ್ಗೆ ಅಧಿಕೃತವಾಗಿ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಬೆಂಗಳೂರಿನ ಟ್ರಾಫಿಕ್ಗೆ ಮತ್ತೊಂದು ಬಲಿ: ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಒಂದೂವರೆ ವರ್ಷದ ಕಂದಮ್ಮ ಸಾವು!
ಇನ್ನು ಬೆಂಗಳೂರಿನಲ್ಲಿ ಸಂಚಾರಿ ನಿಯಮಗಳ ಉಲ್ಲಂಘನೆ ದಂಡಕ್ಕೆ 50% ರಿಯಾಯಿತಿ ಘೋಷಣೆ ಮಾಡಿದ್ದೇ ತಡ ವಾಹನ ಸವಾರರು ದಂಡ ಪಾವತಿಸುವುದಕ್ಕೆ ಸವಾರರು ಮುಗಿಬಿದ್ದಿದ್ದರು. ವಾಹನ ಸವಾರರು ಸರದಿ ಸಾಲಿನಲ್ಲಿ ನಿಂತು ದಂಡ ಪಾವತಿಸಿದ್ದಾರೆ. ಬಹಳ ದಿನಗಳಿಂದ ಹಲವು ಕೇಸ್ನೊಂದಿಗೆ ಸಾವಿರಾರು ರೂಪಾಯಿ ಬಾಕಿ ಉಳಿಸಿಕೊಂಡಿದ್ದವರು ಶೇ.50 ರಿಯಾಯಿತಿ ಅವಕಾಶವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ.
ಪೊಲೀಸ್ ಇಲಾಖೆ ಸಹ ರಿಯಾಯಿತಿ ನೀಡಿ ಸರ್ಕಾರದ ಬೊಕ್ಕಸ ತುಂಬಿಸಿದೆ. ಈ ಆಫರ್ನಿಂದ 10 ದಿನಗಳಲ್ಲಿ ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 122 ಕೋಟಿ ರೂ ಹರಿದು ಬಂದಿದ್ದು, ಸುಮಾರು 42 ಲಕ್ಷ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


