ಬೆಂಗಳೂರು: ಇಬ್ಬರು ಸರಗಳ್ಳರ ಬಂಧನ, 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ
ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಂಗಳೂರು: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ ಸೋಮವಾರ ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ಗುರ್ತಿಸಲಾಗಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಕ್ಯಾಂಟರ್ ಹರಿದು ಮಹಿಳೆ ದುರ್ಮರಣ
ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್ನ ಬಂಡೆ ಮಠದಲ್ಲಿ 71 ವರ್ಷದ ವೈದ್ಯನನ್ನು ದರೋಡೆ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


