ಗದಗ: ಆಟೋ- ಮಿನಿ ಬಸ್ ನಡುವೆ ಭೀಕರ ಅಪಘಾತ; ಮೂರು ಮಂದಿ ಸ್ಥಳದಲ್ಲೇ ಸಾವು, 8 ಮಂದಿಗೆ ಗಾಯ
ಭಾನುವಾರ ರಾತ್ರಿ ಬೆಟಗೇರಿ ಹೊರವಲಯದಲ್ಲಿ ಮಿನಿ ಬಸ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.

ಗದಗ: ಭಾನುವಾರ ರಾತ್ರಿ ಬೆಟಗೇರಿ ಹೊರವಲಯದಲ್ಲಿ ಮಿನಿ ಬಸ್‌ಗೆ ಆಟೋರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ.
ಮೃತರನ್ನು ಸೈಯದ್ ಸೂದಿ (20), ಪ್ರದೀಪ್ ಪೂಜಾರ್ (40) ಮತ್ತು ನಿಖಿಲ್ ಮಂಜುನಾಥ ಮುಳಗುಂದ (20) ಎಂದು ಗುರುತಿಸಲಾಗಿದೆ. ಮಿನಿ ಬಸ್‌ನಲ್ಲಿದ್ದ ಎಂಟು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಗದಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮಿನಿ ಪ್ಯಾಸೆಂಜರ್ ಬಸ್ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಬಾಗಲಕೋಟೆಯಿಂದ ಹೊರಟಿತ್ತು, ಆಟೋ ರಿಕ್ಷಾ ಬೆಟಗೇರಿಯಿಂದ ನರಸಾಪುರ ಗ್ರಾಮದ ಬಳಿಯ ದಂಡಿನ ದುರ್ಗಮ್ಮ ದೇವಸ್ಥಾನದ ಕಡೆಗೆ ಬರುತ್ತಿತ್ತು. ವೇಗವಾಗಿ ಬಂದ ಆಟೋ ಮಿನಿ ಬಸ್‌ಗೆ ಡಿಕ್ಕಿ ಹೊಡೆದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಿನಿ ಬಸ್‌ನಲ್ಲಿ ಗಾಯಗೊಂಡಿದ್ದ ಎಂಟು ಮಂದಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಮದುವೆ ಸಮಾರಂಭ ಮುಗಿಸಿ ಗದಗಕ್ಕೆ ವಾಪಸಾಗುತ್ತಿದ್ದೇವು ಎಂದು ಮಿನಿ ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ತಿಳಿಸಿದರು, ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತ ಸಂಭವಿಸಿದಾಗ ಹೆಚ್ಚಿನ ಪ್ರಯಾಣಿಕರು ನಿದ್ರಿಸುತ್ತಿದ್ದರು. ಹಠಾತ್ ಶಬ್ದ ಕೇಳಿದಾಗ ಎಲ್ಲರು ಬೆಚ್ಚಿಬಿದ್ದಿದ್ದಾಗಿ ತಿಳಿಸಿದ್ದಾರೆ.
ಆಟೋರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೂವರು ಅವಶೇಷಗಳಲ್ಲಿ ಸಿಲುಕಿಕೊಂಡಿದ್ದರು. ಮೃತರ ದೇಹಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


