ಅಕ್ರಮದ ಬಗ್ಗೆ ದಾಖಲೆ ಕೊಡಲಿ, ತನಿಖೆ ಮಾಡಿಸುತ್ತೇವೆ: ಸಿಎಂ; ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು: ಯಡಿಯೂರಪ್ಪ
ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಟೆಂಡರ್ ಅಕ್ರಮ ನಡೆಯುತ್ತಿದೆ ಎಂದು ಜಂಟಿ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಗಾಳಿಯಲ್ಲಿ ಗುಂಡು ಹಾರಿಸುತ್ತಿದೆ, ತಮ್ಮ ಅಡಳಿತದ ಅನುಭವವನ್ನು ಹೇಳುತ್ತಿದೆ. ಎಲ್ಲಿ ಅಕ್ರಮ ಆಗಿದೆ, ಯಾರು ಅಕ್ರಮ ಮಾಡಿದ್ದಾರೆ, ದಾಖಲೆ ಸಮೇತ ಎಲ್ಲವನ್ನೂ ನಮ್ಮ ಮುಂದಿಡಲಿ. ಎಲ್ಲಿಗೆ ಬೇಕಾದರೂ ದೂರು ಕೊಡಲಿ, ತನಿಖೆ ಮಾಡಿಸಲು ನಾವು ರೆಡಿ ಇದ್ದೇವೆ ಎಂದು ಹೇಳಿದ್ದಾರೆ.
ಡಿ ಕೆ ಶಿವಕುಮಾರ್ ಮೇಲೆ ಎಂತಹ, ಯಾವೆಲ್ಲಾ ಆರೋಪಗಳಿವೆ ಎಂಬುದು ಎಲ್ಲರಿಗೂ ಗೊತ್ತಿದೆ, ಮೊದಲು ಅವರು ಜೈಲಿಗೆ ಹೋಗುವುದನ್ನು ತಪ್ಪಿಸಿಕೊಂಡು ರಕ್ಷಿಸಿಕೊಳ್ಳಲಿ ಎಂದು ತಿರುಗೇಟು ಕೊಟ್ಟರು.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಾಯಕರು ಹುಚ್ಚರು, ತಲೆ ತಿರುಕರು, ತಲೆ ತಿರುಕರು ಈ ರೀತಿ ಮಾತನಾಡುತ್ತಾರೆಂದರು.
ತಲೆ ಸರಿ ಇದ್ದವರು ಈ ರೀತಿ ಮಾತನಾಡೋದಿಲ್ಲ, ಅಧಿಕಾರದ ಭ್ರಮೆಯಿಂದ ಈ ರೀತಿ ಮಾತನಾಡುತ್ತಿದ್ದಾರೆ. ನಾವು ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅಂತಾ ಕನಸು ಕಾಣ್ತಿದ್ದಾರೆ. ಕಾಂಗ್ರೆಸ್ ಆರೋಪದಲ್ಲಿ ಯಾವುದೇ ಹುರುಳಿಲ್ಲ, ಸದನದಲ್ಲಿ ಕಾಂಗ್ರೆಸ್ನವರು ಪ್ರಸ್ತಾಪ ಮಾಡಲಿ, ಅದಕ್ಕೆ ನಾವು ತಕ್ಕ ಉತ್ತರವನ್ನು ಕೊಡುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


