ಭೂಮಿ ಕಳೆದುಕೊಂಡಿರುವ ರೈತರು ಸ್ವಂತ ಜಮೀನಿನಲ್ಲೇ ನಿವೇಶನ ಪಡೆಯಬಹುದು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಭೂಮಿ ಕಳೆದುಕೊಳ್ಳುವ ರೈತರಿಗೆ ಅವರ ಸ್ವಂತ ಆಸ್ತಿಯಲ್ಲಿ ಅಭಿವೃದ್ಧಿಪಡಿಸಿದ ಭೂಮಿಯ ಒಂದು ಭಾಗವನ್ನು ಹಂಚಿಕೆ ಮಾಡಲು ಮತ್ತು ಅವರಿಗೆ ಪರಿಹಾರವಾಗಿ ಭೂಮಿಯನ್ನು ಮಂಜೂರು ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಪ್ರಸ್ತಾಪಿಸಿದೆ.

ಬೆಂಗಳೂರು: ಭೂಮಿ ಕಳೆದುಕೊಳ್ಳುವ ರೈತರಿಗೆ ಅವರ ಸ್ವಂತ ಆಸ್ತಿಯಲ್ಲಿ ಅಭಿವೃದ್ಧಿಪಡಿಸಿದ ಭೂಮಿಯ ಒಂದು ಭಾಗವನ್ನು ಹಂಚಿಕೆ ಮಾಡಲು ಮತ್ತು ಅವರಿಗೆ ಪರಿಹಾರವಾಗಿ ಭೂಮಿಯನ್ನು ಮಂಜೂರು ಮಾಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಕೇಂದ್ರ ಕಚೇರಿಯಲ್ಲಿ ಮಂಗಳವಾರ ಎಂಟು ಗಂಟೆಗಳ ಕಾಲ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚಿಸಲಾಯಿತು.
ಬಿಡಿಎ ನಿವೇಶನಗಳ ಹಂಚಿಕೆಯಲ್ಲಿ ಗಣಕೀಕೃತ ನಿಯಮಗಳನ್ನು ಅನುಸರಿಸಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಭೂಮಿ ಕಳೆದುಕೊಂಡವರಿಗೆ ಈ ಮಾದರಿಯಲ್ಲಿ ವಿನಿಮಯ ಭೂಮಿ ನೀಡಲಾಗುವುದು ಎಂದು ಎಲ್ಲಾ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮ್ಯಾರಥಾನ್ ಸಭೆಯಲ್ಲಿ ಭಾಗವಹಿಸಿದ ಬಿಡಿಎ ಅಧಿಕಾರಿಯೊಬ್ಬರು ಹೇಳಿದರು. .
ಭೂಮಿ ಕಳೆದುಕೊಳ್ಳುವವರು ತಮ್ಮ ಭೂಮಿಯನ್ನು ವೀಕ್ಷಿಸುತ್ತಾರೆ, ಕೆಲವೊಮ್ಮೆ ಪ್ರಮುಖ ಸ್ಥಳಗಳಲ್ಲಿ ಬೇರೆಯವರಿಗೆ ಹಂಚಿಕೆ ಮಾಡಲಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಸ್ವಲ್ಪ ದೂರದ ಸ್ಥಳದಲ್ಲಿ ಪರಿಹಾರವಾಗಿ ಸೈಟ್‌ಗಳನ್ನು ಪಡೆಯಬಹುದಾಗಿದೆ . ಅವರು ಕಳೆದುಕೊಂಡ ಭೂಮಿಯಲ್ಲಿ ಕನಿಷ್ಠ ಶೇ.10-20ರಷ್ಟು ನಿವೇಶನ ಹಂಚಿಕೆ ಮಾಡಿದರೆ ಅವರಿಗೆ ತೃಪ್ತಿ ಸಿಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯ ದೊರಕಿಸಿಕೊಡಲು ಈ ವ್ಯವಸ್ಥೆ ಬಗ್ಗೆ ಪ್ರಸ್ತಾಪಿಸಲಾಗಿದೆ ಎಂದು ಬಿಡಿಎ ಆಯುಕ್ತ ಕುಮಾರ್ ಜಿ ನಾಯಕ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಬಿಡಿಎಯ ವಿವಿಧ ವಿಭಾಗಗಳ ನಡುವೆ ಹೆಚ್ಚಿನ ಸಮನ್ವಯತೆಗೆ ಒತ್ತಾಯಿಸಿದ್ದಾರೆ. ಅರ್ಕಾವತಿ ಮತ್ತು ನಾಡಪ್ರಭು ಕೆಂಪೇಗೌಡ ಲೇಔಟ್‌ನ ಹಂಚಿಕೆದಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾನು ಅವಲೋಕನ ನಡೆಸಿದ್ದೇನೆ, ಎಲ್ಲಾ ವಿಭಾಗಗಳ ಸಮನ್ವಯತೆಯಿಂದ ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸಬಹುದು ಎಂದು ಹೇಳಿದ್ದಾರೆ.
‘ಸಾರ್ವಜನಿಕರು ಯಾವುದೇ ಕಾಮಗಾರಿಗೆ ಸಂಬಂಧಿಸಿದಂತೆ ಬಿಡಿಎ ಕಚೇರಿಗೆ ಭೇಟಿ ನೀಡದಿರುವಂತೆ ನಮ್ಮ ಎಲ್ಲ ಪ್ರಕ್ರಿಯೆಗಳು ಆನ್‌ಲೈನ್ ಮಾಡಲು ಆಯುಕ್ತರು ಉತ್ಸುಕರಾಗಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ್ದ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಬಿಡಿಎಯಿಂದ ಮಾಡಲಾದ ಎಲ್ಲಾ ಕೆಲಸಗಳನ್ನು ತ್ವರಿತವಾಗಿ ಮಾಡಲು ಬ್ಲೂ ಪ್ರಿಂಟ್ ಜೊತೆ ಹೊರಬರಲು ಎಲ್ಲಾ ಅಧಿಕಾರಿಗಳಿಗೆ ಕುಮಾರ್ ಜಿ ನಾಯಕ್ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


