ರಾಜ್ಯ

ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಪತ್ನಿ ವಿಯೋಗ

ಹಿರಿಯ ಕಾಂಗ್ರೆಸ್ ನಾಯಕ, ಶ್ರೀನಿವಾಸಪುರ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಅವರು ಶುಕ್ರವಾರ ವಿಧಿವಶರಾಗಿದ್ದಾರೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್​ಗೆ ಪತ್ನಿ ವಿಯೋಗ
ರಮೇಶ್ ಕುಮಾರ್​ಗೆ ಪತ್ನಿ ವಿಯೋಗ
Published On :

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ, ಶ್ರೀನಿವಾಸಪುರ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್  ಅವರ ಪತ್ನಿ ವಿಜಯಮ್ಮ(69) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. 

ಕಳೆದ 2 ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರು ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ವಿಜಯಮ್ಮ ಅವರು ಪತಿ, ಒರ್ವ ಪುತ್ರಿ, ಒರ್ವ ಪುತ್ರ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ವಿಜಯಮ್ಮ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ಪಕ್ಷದ ಹಿರಿಯ ನಾಯಕರು, ಆತ್ಮೀಯರು ಆದ ಕೆ.ಆರ್ ರಮೇಶ್ ಕುಮಾರ್ ಧರ್ಮಪತ್ನಿ ವಿಜಯಮ್ಮ ಅವರು ನಿಧನರಾದ ಸುದ್ದಿ ತಿಳಿದು ಅತೀವ ನೋವಾಯಿತು. ರಮೇಶ್ ಕುಮಾರ್ ಅವರ ಕುಟುಂಬದ ಶೋಕದಲ್ಲಿ ನಾನೂ ಭಾಗಿ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರು ಸಹ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದು, ಕರ್ನಾಟಕ ವಿಧಾನಸಭೆಯ ಹಿರಿಯ ಶಾಸಕರು ಹಾಗೂ ಮಾಜಿ ವಿಧಾನಸಭಾಧ್ಯಕ್ಷರಾದ ರಮೇಶ್ ಕುಮಾರ್ ಅವರ ಧರ್ಮಪತ್ನಿ ಶ್ರೀಮತಿ ವಿಜಯಮ್ಮನವರ ನಿಧನದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ರಮೇಶ್ ಕುಮಾರ್ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನಿಡಲಿಯೆಂದು ಪ್ರಾರ್ಥಿಸುತ್ತೇನೆ‌ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.