ಕರ್ನಾಟಕ ಬಜೆಟ್ 2023: ವೃತ್ತಿಪರ ತೆರಿಗೆ ವಿನಾಯಿತಿ ಮಿತಿ 15 ರಿಂದ 25 ಸಾವಿರ ರೂ. ಗೆ ಏರಿಕೆ
ಕಡಿಮೆ ಆದಾಯದವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವೃತ್ತಿಪರ ತೆರಿಗೆ (Profession Tax) ಯನ್ನು 15 ಸಾವಿರದಿಂದ 25 ಸಾವಿರಕ್ಕೆ ಏರಿಕೆ ಮಾಡಿರುವುದಾಗಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.

ಬೆಂಗಳೂರು: ಕಡಿಮೆ ಆದಾಯದವರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವೃತ್ತಿಪರ ತೆರಿಗೆ (Profession Tax) ಯನ್ನು 15 ಸಾವಿರದಿಂದ 25 ಸಾವಿರಕ್ಕೆ ಏರಿಕೆ ಮಾಡಿರುವುದಾಗಿ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.
ವೃತ್ತಿಪರ ತೆರಿಗೆ ವಿನಾಯಿತಿ ಮಿತಿ ಏರಿಕೆಯಿಂದಾಗಿ ಕಡಿಮೆ ವರಮಾನದ ವರ್ಗಕ್ಕೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದ್ದಾರೆ.
25 ಸಾವಿರಕ್ಕಿಂತ ಕಡಿಮೆ ಸಂಬಳ ಪಡೆಯುವವರಿಂದ ವೃತ್ತಿಪರ ತೆರಿಗೆ ಪಡೆಯಲಾಗುವುದಿಲ್ಲ. 25 ಸಾವಿರ ರೂಗಿಂತ ಹೆಚ್ಚು ಸಂಬಳ ಪಡೆಯುವವರು 200 ರೂ ವೃತ್ತಿ ತೆರಿಗೆ ಪಾವತಿಸಬೇಕಾಗುತ್ತದೆ.
ತೆರಿಗೆ ಕುರಿತು ಬಜೆಟ್ ನಲ್ಲಿ ಪ್ರಸ್ತಾಪವಾದ ಅಂಶಗಳು ಹೀಗಿವೆ...
ರಾಜ್ಯದಲ್ಲಿ ಜಿಎಸ್ಟಿ ಸಂಗ್ರಹ ಗಣನೀಯವಾಗಿ ಹೆಚ್ಚಿದೆ. 2022-23ರ ಹಣಕಾಸು ವರ್ಷದಲ್ಲಿ ರಾಜ್ಯಕ್ಕೆ ಸಿಗುವ ಜಿಎಸ್ಟಿ ಪರಿಹಾರ ಸೇರಿ ಒಟ್ಟು ವಾಣಿಜ್ಯ ತೆರಿಗೆ ಸಂಗ್ರಹವು 93,558 ಕೋಟಿ ರೂ ಎಂದು ಅಂದಾಜು ಮಾಡಲಾಗಿದೆ. ವಾಣಿಜ್ಯ ತೆರಿಗೆ ಇಲಾಖೆಯು ಜಿಎಸ್ಟಿ ಪರಿಹಾರ ಹೊರತುಪಡಿಸಿ 72,010 ಕೋಟಿ ರೂ ಗುರಿ ಹೊಂದಿತ್ತು. ಇದನ್ನು ಮೀರಿ 83,010 ಕೋಟಿ ರೂ ಸಂಗ್ರಹ ಮಾಡಲಾಗುತ್ತಿದೆ. ಕೇಂದ್ರದಿಂದ ಜಿಎಸ್ಟಿ ಪರಿಹಾರವಾಗಿ 10,548 ಕೋಟಿ ರೂ ಸಿಗಲಿದೆ.
2023-24 ರ ಸಾಲಿನ ವರ್ಷಕ್ಕೆ ಜಿಎಸ್ಟಿ ಪರಿಹಾರ ಹೊರತುಪಡಿಸಿ 92,000 ಕೋಟಿ ರೂ ತೆರಿಗೆ ಸಂಗ್ರಹಿಸಬೇಕೆಂದು ವಾಣಿಜ್ಯ ಇಲಾಖೆಗೆ ಗುರಿ ಕೊಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


