ರಾಜ್ಯ

ದೊಡ್ಡಬಳ್ಳಾಪುರ: ಕ್ರಿಕೆಟ್ ಟೂರ್ನಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಇಬ್ಬರಿಗೆ ಚೂರಿ ಇರಿದು ಬರ್ಬರ ಹತ್ಯೆ

ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ.

ದೊಡ್ಡಬಳ್ಳಾಪುರ: ಕ್ರಿಕೆಟ್ ಟೂರ್ನಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಇಬ್ಬರಿಗೆ ಚೂರಿ ಇರಿದು ಬರ್ಬರ ಹತ್ಯೆ
ಯುವಕರ ಹತ್ಯೆ
Published On :

ದೊಡ್ಡಬಳ್ಳಾಪುರ: ಶಿವರಾತ್ರಿ ಹಬ್ಬದ ಪ್ರಯುಕ್ತ ಕ್ರಿಕೆಟ್ ಆಡುವಾಗ ನಡೆದ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಾದವರನ್ನು ಭರತ್, ಪ್ರತೀಕ್ ಎಂದು ಗುರುತಿಸಲಾಗಿದೆ.  

ಬಿಜೆಪಿ ಮುಖಂಡ ಧೀರಜ್​ ಅವರು ಕ್ರಿಕೆಟ್ ಟೂರ್ನಮೆಂಟ್ ಆಯೋಜನೆ ಮಾಡಿದ್ದು, ಈ ವೇಳೆ ನಡೆದ ಜಗಳದಲ್ಲಿ ಭರತ್, ಪ್ರತೀಕ್​ಗೆ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕೊಲೆ ನಂತರ ಆರೋಪಿಗಳು ಪರಾರಿಯಾಗಿದ್ದಾರೆ.

ಟೂರ್ನಿ ವೇಳೆ ಮೈದಾನದಲ್ಲಿ ಕಾರು ನಿಲ್ಲಿಸಿದ್ದನ್ನು ಭರತ್ ಹಾಗೂ ಪ್ರತೀಕ್ ಪ್ರಶ್ನಿಸಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿತ್ತು. ಈ ವೇಳೆ ಗ್ರಾಮಸ್ಥರು ಇತರೆ ಆಟಗಾರರು ಜಗಳ ಬಿಡಿಸಿದ್ದರು. 

ನಂತರ ಭರತ್, ಪ್ರತೀಕ್ ಬಸ್​ ಸ್ಟ್ಯಾಂಡ್​ಗೆ ಬಂದಾಗ ಅಲ್ಲಿಗೆ ಬಂದ ಗುಂಪೊಂದು ಇಬ್ಬರನ್ನು ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಘಟನೆ ನಂತರ ಸ್ಥಳ ಉದ್ವಿಗ್ನಗೊಂಡಿದ್ದು ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದರು. ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.