ಬೆಂಗಳೂರು: ಕಾಡ್ಗಿಚ್ಚು ನಂದಿಸುವ ವೇಳೆ ಗಾಯಗೊಂಡಿದ್ದ ಗಾರ್ಡ್ ಸುಂದರೇಶ್ ಸಾವು
ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ...

ಬೆಂಗಳೂರು: ಸಕಲೇಶಪುರ ತಾಲೂಕಿನ ಕಾಡುಮನೆ ಎಸ್ಟೇಟ್ ಬಳಿಯ ಅರಣ್ಯದಲ್ಲಿ ಗುರುವಾರ ಕಾಡ್ಗಿಚ್ಚು ನಂದಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಅರಣ್ಯ ಇಲಾಖೆಯ ಗಾರ್ಡ್ ಸುಂದರೇಶ್ ಅವರು ಶನಿವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅರಣ್ಯಾಧಿಕಾರಿಗಳಾದ ಮಂಜುನಾಥ್, ಗಾರ್ಡ್ ಗಳಾದ ಸುಂದರೇಶ್ ಮತ್ತು ತುಂಗೇಶ್ ಅವರು ಕಾಡ್ಗಿಚ್ಚು ನಂದಿಸುವ ವೇಳೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಶೇ. 80 ರಷ್ಟು ಸುಟ್ಟ ಗಾಯಗಳಾಗಿದ್ದ ಸುಂದರೇಶ್ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಹೀಗಾಗಿ ಝೀರೋ ಟ್ರಾಫಿಕ್‌ನಲ್ಲಿ ಸುಂದರೇಶ್ ಹಾಗೂ ಮಂಜುನಾಥ್ ಅವರನ್ನು ಬೆಂಗಳೂರಿಗೆ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಸುಂದರೇಶ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಇಂದು ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರಾದ ಸುಂದರೇಶ್ ಅವರ ಮೃತದೇಹಕ್ಕೆ ಹಾಸನದ ಅರಣ್ಯ ಇಲಾಖೆಯಿಂದ ಗೌರವಾರ್ಪಣೆ ಸಲ್ಲಿಸಿದ ಬಳಿಕ ಸ್ವಗ್ರಾಮಕ್ಕೆ ಕಳುಹಿಸಲಾಗುವುದು. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


