ರಾಜ್ಯ

ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ

ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಬೆಂಗಳೂರು: ಹಿಟ್ ಅಂಡ್ ರನ್, ಅಪಘಾತದಲ್ಲಿ ಡೆಲಿವರಿ ಬಾಯ್ ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಮನೆಗಳಿಗೆ ಆಹಾರ ತಲುಪಿಸುತ್ತಿದ್ದ 20 ವರ್ಷದ ಡೆಲಿವರಿ ಹುಡುಗನೊಬ್ಬ  ಹಿಟ್ ಅಂಡ್ ರನ್ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ  ಮೈಕೋ ಲೇಔಟ್ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಮೃತನನ್ನು ಹಾಸನ ಮೂಲದ ಕಮೀಲ್ ಅಹಮದ್ ಜಮಾದಾರ್ ಎಂದು ಗುರುತಿಸಲಾಗಿದ್ದು, ಜೆ ಸಿ ನಗರದಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಬನ್ನೇರುಘಟ್ಟ ರಸ್ತೆಯ ಜಲಭವನದ ಬಳಿ ಬೆಳಗ್ಗೆ 5.30ರ ಸುಮಾರಿಗೆ ವೇಗವಾಗಿ ಬಂದ ವಾಹನವೊಂದು ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಜಮಾದಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವಾಹನ ಹಾಗೂ ಚಾಲಕನ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.