ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗ ದುರ್ಮರಣ
ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಕಸಬಾ ಹೋಬಳಿ ಕೋಳೂರಿನಲ್ಲಿ ನಡೆದಿದೆ.

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ತಾಯಿ-ಮಗ ಸಾವನ್ನಪ್ಪಿರುವ ದಾರುಣ ಘಟನೆ ಕಸಬಾ ಹೋಬಳಿ ಕೋಳೂರಿನಲ್ಲಿ ನಡೆದಿದೆ.
ಮೃತರನ್ನು ಕೋಳೂರು ನಿವಾಸಿ 35 ವರ್ಷದ ರೂಪ ಮತ್ತು ಆಕೆಯ ಮಗ 9 ವರ್ಷದ ಹೇಮಂತ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಕೋಳೂರಿನ ಕೃಷಿ ಹೊಂಡದ ಬಳಿ ಜಾನುವಾರು ಮೇಯಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಹೇಮಂತ್ ಕೃಷಿ ಹೊಂಡದ ಬಳಿ ಆಟವಾಡುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ಹೋದ ತಾಯಿ ಕೂಡ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.
ಮೃತರ ದೇಹಗಳನ್ನು ಸ್ಥಳೀಯರು ಹಾಗೂ ಗ್ರಾಮಾಂತರ ಠಾಣೆ ಪೊಲೀಸರು ಹೊರತೆಗೆದಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


