ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನೇ ಕದ್ದ ಖತರ್ನಾಕ್ ಗಳು!
ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.

ಕಲಬುರಗಿ: ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್ಆರ್ಟಿಸಿ ಬಸ್ಸನ್ನೆ ಈ ಖತರ್ನಾಕ್ ಕಳ್ಳರು ಎಗರಿಸಿದ್ದಾರೆ, ಈ ವಿಚಿತ್ರ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ಇಂದು ಮುಂಜಾನೆ 3:30ಕ್ಕೆ ನಡೆದಿದೆ.
ತಡರಾತ್ರಿ ಬಸ್ ನಿಲ್ದಾಣದಲ್ಲಿ ನಿಲ್ಲಿಸಿದ್ದ ಎನ್ ಈಕೆಆರ್ ಟಿಸಿ ಬಸ್ ಒಂದನ್ನು ಕಳ್ಳರು ನಸುಕಿನ ಜಾವ 3-30ರ ಸುಮಾರಿಗೆ ಕಳ್ಳತನ ಮಾಡಿರುವ ಘಟನೆ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ನಂಬರ್ 2 ಡಿಪೋಗೆ ಸೇರಿದ ಬಸ್ ಇದಾಗಿದೆ.
KA 38 F 971 ನಂಬರ್ ನ ಬಸ್ ಕಳ್ಳತನ ಮಾಡಿದ ಕಳ್ಳರು, ಮಿರಿಯಾಣ ಮಾರ್ಗವಾಗಿ ತಾಂಡೂರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಇದರಿಂದಾಗಿ ಬಸ್ಸು ಹುಡುಕಾಟಕ್ಕೆ ಪೊಲೀಸರ ಎರಡು ವಿಶೇಷ ತಂಡಗಳನ್ನು ರಚನೆ ಮಾಡಲಾಗಿದೆ. ಈಗಾಗಲೇ ಎರಡು ಪೊಲೀಸ್ ತಂಡಗಳು ತೆಲಂಗಾಣದ ಪ್ರದೇಶಗಳಲ್ಲಿ ಹುಡುಕಾಟ ನಡೆಸಿದೆ. ಸ್ಥಳಕ್ಕೆ ಚಿಂಚೋಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


