ರಿಯಲ್ ಎಸ್ಟೇಟ್ ಉದ್ಯಮ ಉತ್ತೇಜಿಸಲು ಸರ್ಕಾರ ಹಲವು ಕ್ರಮ ಕೈಗೊಂಡಿದೆ: ಸಚಿವ ಆರ್.ಅಶೋಕ್
ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ & ಬಿ ಮತ್ತು ಸೆಕ್ಷನ್ 109 ಅನ್ನು ರದ್ದುಗೊಳಿಸಲಾಗಿದ್ದು, ಇದು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಸೋಮವಾರ ಹೇಳಿದರು.

ಬೆಂಗಳೂರು: ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79 ಎ & ಬಿ ಮತ್ತು ಸೆಕ್ಷನ್ 109 ಅನ್ನು ರದ್ದುಗೊಳಿಸಲಾಗಿದ್ದು, ಇದು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಅನುಕೂಲವಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ಸೋಮವಾರ ಹೇಳಿದರು.
ಕ್ರೆಡೈ ಕರ್ನಾಟಕ ವಿಭಾಗ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ಆಯೋಜಿಸಿದ್ದ ಎರಡು ದಿನಗಳ ‘ಸ್ಟೇಟ್‌ಕಾನ್’ ಸಮ್ಮೇಳನದಲ್ಲಿ ಸಚಿವರು ಮಾತನಾಡಿದರು.
ರಿಯಲ್ ಎಸ್ಟೇಟ್ ಕ್ಷೇತ್ರವನ್ನು ಉತ್ತೇಜಿಸಲು ರಾಜ್ಯ ಸರ್ಕಾರವು ವಿವಿಧ ಕ್ರಮಗಳನ್ನು ಕೈಗೊಂಡಿದೆ. ರಾಜ್ಯ ಸರ್ಕಾರ ಕಂದಾಲಯ ಇಲಾಖೆ ಮೂಲಕ ಜನರಿಗೆ ಹೆಚ್ಚು ಅನುಕೂಲವಾಗುವ ಕಾರ್ಯಕ್ರಮಗಳ ಜಾರಿಗೆ ಆದ್ಯತೆ ನೀಡಿದೆ. ದಶಕಗಳಿಂದ ಸಮಸ್ಯೆಯ ಗೂಡಾಗಿರುವ ಭೂ ಪರಿವರ್ತನೆಯ ಪ್ರಕ್ರಿಯೆಯನ್ನು ಸರಳಗೊಳಿಸಲು ಇದರ ಅವಧಿಯನ್ನು 7 ದಿನಕ್ಕೆ ಇಳಿಸಲಾಗಿದೆ. ಒಂದು ವೇಳೆ ಈ ಸಮಯದೊಳಗೆ ಡಿಸಿಯವರು ಪ್ರಮಾಣಪತ್ರ ನೀಡದಿದ್ದಲ್ಲಿ ಅರ್ಜಿದಾರನಿಗೆ ತಾನು ಸಲ್ಲಿಸಿರುವ ಭೂಮಿಯ ಭೂ ಪರಿವರ್ತನೆ ಸ್ವಯಂ ಜನರೇಟ್ ಆಗಲಿದೆ. ಆ ರೀತಿಯ ವ್ಯವಸ್ಥೆಯನ್ನು ನಾವು ಜಾರಿಗೆ ತರಲಿದ್ದೇವೆ ಎಂದು ಹೇಳಿದರು.
ಇದರ ಜೊತೆಗೆ ಆಸ್ತಿ ನೋಂದಣಿಗೆ ಹೋಗುವಾಗ ಎಲ್ಲ ದಾಖಲೆಪತ್ರಗಳನ್ನು ತೆಗೆದುಕೊಂಡು ಹೋಗಬೇಕಾಗಿತ್ತು. ಆದರೆ, ಕಾವೇರಿ 2.0 ಜಾರಿಯಿಂದ ಇದೆಲ್ಲವನ್ನು ತೆಗೆದುಕೊಂಡು ಹೋಗುವ ಅಗತ್ಯವಿಲ್ಲ. ಈ ಎಲ್ಲಾ ದಾಖಲೆ ಪತ್ರಗಳು ಸಬ್ ರಿಜಿಸ್ಟರೇಷನ್ ಆಫೀಸ್‌ನಲ್ಲೇ ಲಭ್ಯವಿರಲಿದ್ದು, ಅಲ್ಲಿಯೇ ಹುಡುಕಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಉದ್ಯಮದವರು ಕೇಳಿದ್ದ ಭರವಸೆಗಿಂತ ಹೆಚ್ಚು ಸೌಲಭ್ಯವನ್ನು ಒದಗಿಸಲಾಗಿದೆ ಎಂದು ತಿಳಿಸಿದರು.
ಕ್ರೆಡೈ ಬೆಂಗಳೂರು ವಿಭಾಗದ ಅಧ್ಯಕ್ಷ ಭಾಸ್ಕರ್ ಟಿ ನಾಗೇಂದ್ರಪ್ಪ ಮಾತನಾಡಿ, ರಾಜ್ಯ ಸರ್ಕಾರ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿರುವುದಕ್ಕೆ ನಾವು ಪ್ರಶಂಸಿಸುತ್ತೇವೆ. ಅಭಿವೃದ್ಧಿಯ ವೇಗವನ್ನು ಹೆಚ್ಚಿಸಲು, ಕಾಲಮಿತಿಯೊಂದಿಗೆ ಮಂಜೂರಾತಿ ಪ್ರಕ್ರಿಯೆಗೆ, ಅನುಮೋದನೆಗೆ ಏಕಗವಾಕ್ಷಿ ಪದ್ಧತಿಯನ್ನು ತಂದಲ್ಲಿ ರಿಯಾಲ್ಟಿ ವ್ಯವಹಾರ ಸುಲಭಗೊಳಿಸಬಹುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


