ಕಾರ್ಯಕ್ರಮಕ್ಕೆ ತಡವಾಗಿ ಬಂದ ಬೊಮ್ಮಾಯಿ; ಸನ್ಮಾನ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬೋರ್ಗ್; ಸಿಎಂ ಗೆ ಮುಖಭಂಗ
ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.

ಬೆಂಗಳೂರು: ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಒಂದೂವರೆ ಗಂಟೆ ತಡವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಟೆನಿಸ್ ದಿಗ್ಗಜ ಬ್ಯೋನ್ ಬೋರ್ಗ್ ಅವರು ಮಂಗಳವಾರ ಕರ್ನಾಟಕ ರಾಜ್ಯ ಲಾನ್ ಟೆನಿಸ್ ಸಂಸ್ಥೆ ಯಲ್ಲಿ ಸನ್ಮಾನ ಸ್ವೀಕರಿಸಲು ನಿರಾಕರಿಸಿದ್ದಾರೆ.
ಹನ್ನೊಂದು ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಗಳ ವಿಜೇತ, ಸ್ವೀಡನ್ ದೇಶದ ಬೋರ್ಗ್ ಅವರ ಪುತ್ರ ಲಿಯೊ ಬೋರ್ಗ್, ಕೆಎಸ್‌ಎಲ್‌ಟಿಎ ಕೋರ್ಟ್‌ನಲ್ಲಿ ನಡೆಯುತ್ತಿರುವ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯಲ್ಲಿ ಭಾಗವಹಿಸಿದ್ದಾರೆ. ಮಗನ ಆಟ ನೋಡಲು ಅವರು ಬೆಂಗಳೂರಿಗೆ ಬಂದಿದ್ದಾರೆ.
ಭಾರತದ ಮಾಜಿ ಆಟಗಾರ ವಿಜಯ್ ಅಮೃತ್‌ರಾಜ್ ಮತ್ತು ಬೋರ್ಗ್ ಅವರನ್ನು ಬಸವರಾಜ ಬೊಮ್ಮಾಯಿ ಅವರು ಸನ್ಮಾನಿಸುವ ಕಾರ್ಯಕ್ರಮವನ್ನು ಕೆಎಸ್‌ಎಲ್‌ಟಿಎನಲ್ಲಿ ಬೆಳಿಗ್ಗೆ 9.30ಕ್ಕೆ ಏರ್ಪಡಿಸಲಾಗಿತ್ತು. ಮುಖ್ಯಮಂತ್ರಿ ಬರುವುದು ತಡವಾದದ್ದಕ್ಕೆ ಸಮಾರಂಭವನ್ನು 10.15ಕ್ಕೆ ಮುಂದೂಡಲಾಯಿತು. ಆದರೆ 11 ಗಂಟೆಯಾದರೂ ಆರಂಭವಾಗಲಿಲ್ಲ.
ಲಿಯೊ ಅವರ ಪಂದ್ಯ ಬೆಳಿಗ್ಗೆ 11ಕ್ಕೆ ನಿಗದಿಯಾಗಿತ್ತು. ಮಗನ ಆಟ ನೋಡಲು ಬೋರ್ಗ್ ಅವರು ಗ್ಯಾಲರಿಯಲ್ಲಿ ಕುಳಿತುಕೊಂಡರು. ಪಂದ್ಯ ಶುರುವಾಗಿ ಕೆಲವು ನಿಮಿಷಗಳಾದ ಬಳಿಕ ಬೊಮ್ಮಾಯಿ ಅವರು ಬಂದರು.
ಮುಖ್ಯಮಂತ್ರಿ ಬಂದ ವಿಷಯವನ್ನು ಬೋರ್ಗ್ ಅವರ ಗಮನಕ್ಕೆ ತರಲಾಯಿತು. ಪಂದ್ಯ ಮುಗಿದ ಬಳಿಕವಷ್ಟೇ ಬರುವುದಾಗಿ ಬೋರ್ಗ್ ಹೇಳಿದ್ದಾರೆ. ಇದರಿಂದ ಆಯೋಜಕರು ಸಮಾರಂಭವನ್ನು ರದ್ದುಗೊಳಿಸಬೇಕಾಯಿತು. ‘ಬೇರೆ ಕಾರ್ಯಕ್ರಮಗಳು ಇದ್ದ ಕಾರಣ ಮುಖ್ಯಮಂತ್ರಿ ತಡವಾಗಿ ಬಂದರು’ ಎಂದು ಸಂಘಟನಾ ಸಮಿತಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


