ಜನವರಿ ಒಂದೇ ತಿಂಗಳಿನಲ್ಲಿ 6.7 ಲಕ್ಷ ರೂ. ದಂಡ ಸಂಗ್ರಹಿಸಿದ ಬಿಎಂಟಿಸಿ
ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.

ಬೆಂಗಳೂರು: ಸಂಸ್ಥೆಯ ಆದಾಯ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸಿರುವ ಬಿಎಂಟಿಸಿ, ದಂಡದ ರೂಪದಲ್ಲಿ ಜನವರಿ ಒಂದೇ ತಿಂಗಳಿನಲ್ಲಿ 6.77 ಲಕ್ಷ ರುಪಾಯಿಗಳನ್ನು ಸಂಗ್ರಹಿಸಿದೆ.
ಬಿಎಂಟಿಸಿ ಸಂಸ್ಥೆಯ ತನಿಖಾ ತಂಡಗಳು 2023ರ ಜನವರಿ ತಿಂಗಳಿನಲ್ಲಿ ಒಟ್ಟು 16,226 ಟ್ರಿಪ್‌ಗಳನ್ನು ತಪಾಸಣೆ ಮಾಡಿದ್ದು, ಈ ವೇಳೆ 3591 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಮಾಡಿದೆ. ಇದರಿಂದ ಒಟ್ಟು ರೂ. 6,77,190 ದಂಡ ವಸೂಲಿಯಾಗಿದೆ. ಸಂಸ್ಥೆಯ ನಿರ್ವಾಹಕರ ವಿರುದ್ಧ 1,521 ಪ್ರಕರಣಗಳ ದಾಖಲಾಗಿದೆ.
ಮೋಟಾರು ವಾಹನ ಕಾಯ್ದೆ 1988ರ ಕಾಲಂ177 ಮತ್ತು 94 ರ ಪ್ರಕಾರ ದಂಡ ವಸೂಲಿ ಮಾಡಲಾಗಿದ್ದು, ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 322 ಪುರುಷ ಪ್ರಯಾಣಿಕರಿಂದ ಒಟ್ಟು 32,200 ರೂ ಸಂಗ್ರಹವಾಗಿದೆ.
ಪ್ರಯಾಣಿಕರು ಬಿಎಂಟಿಸಿ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್ ದಿನದ ಪಾಸು / ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸಬೇಕಿದೆ. ಇದರಿಂದ ಅನಗತ್ಯ ದಂಡ ಕಟ್ಟುವುದನ್ನು ತಡೆಯಬಹುದು. ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗಲಿದೆ.
ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಜಾಗದಲ್ಲಿ ಮಹಿಳೆಯರಿಗೆ ಕುಳಿತುಕೊಳ್ಳಲು ಅವಕಾಶ ನೀಡಬೇಕೆಂದು ಬಿಎಂಟಿಸಿಯಿಂದ ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


