ರಾಜ್ಯ

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ

ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಐವರು ಸ್ಥಳದಲ್ಲಿಯೇ ದುರ್ಮರಣ
ಅಪಘಾತಕ್ಕೀಡಾದ ಕಾರಿನ ಚಿತ್ರ
Published On :

ಧಾರವಾಡ: ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪಾದಚಾರಿ ಸೇರಿದಂತೆ ಐವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುರುವಾರ ಸಂಜೆ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ನಡೆದಿದೆ.

ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರನ್ನು ನಾಗಪ್ಪ ಈರಪ್ಪ ಮುದ್ದೋಜಿ(29), ಅವರಾದಿ ಗ್ರಾಮದ ಮಹಂತೇಶ್ ಬಸಪ್ಪ ಮುದ್ದೊಜಿ(40), ಬಸವರಾಜ್ ಶಿವಪುತ್ರಪ್ಪ ನರಗುಂದ(35), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ, ಈರಣ್ಣಾ ಗುರುಸಿದ್ದಪ್ಪ ರಾಮನಗೌಡರ್ (35) (ಪಾದಚಾರಿ) ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.  ಬೆಳಗಾವಿಯಿಂದ ಧಾರವಾಡ ಕಡೆಗೆ ತೆರಳುತ್ತಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.  ವಿಷಯ ತಿಳಿಯುತ್ತಿದ್ದಂತೆಯೇ  ಗರಗ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.