ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.

ಬೆಂಗಳೂರು: ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ನೇಮಕ ಮಾಡಲಾಗಿದೆ.
ಬೆಂಗಳೂರು ದಕ್ಷಿಣ(ಸಂಚಾರ) ವಿಭಾಗದ ಡಿಸಿಪಿಯಾಗಿ ಮೊಹಮ್ಮದ್ ಸುಜೀತ, ಬೆಂಗಳೂರು ನಗರ ಸಿಎಆರ್ನ ಡಿಸಿಪಿಯಾಗಿ ಅರುಣಾಂಗ್ಷು ಗಿರಿ ಅವರನ್ನು ನೇಮಕ ಮಾಡಲಾಗಿದೆ.
ಗುಪ್ತಚರ ಇಲಾಖೆಯ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಡೆಕ್ಕ ಕಿಶೋರ್ ಬಾಬು ಅವರನ್ನು ಹಾಗೂ ಕೊಪ್ಪಳ ಪೊಲೀಸ್ ವರಿಷ್ಠಾಧಿಕಾರಿ(ಎಸ್ಪಿ)ಯಾಗಿ ಯಶೋಧಾ ವಂಟಗೋಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
ಇನ್ನು, ಕೆಎಸ್ಆರ್ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್ ಆಗಿರುವ ಡಾ.ಕೋನ ವಂಶಿಕೃಷ್ಣ ಅವರಿಗೆ ವೈರ್ಲೆಸ್ ಎಸ್ಪಿ ಹುದ್ದೆ ಹೆಚ್ಚುವರಿ ಹೊಣೆಯಾಗಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


