ಬೆಂಗಳೂರು: ಕಲಾಸಿಪಾಳ್ಯ ನೂತನ ಬಸ್ ನಿಲ್ದಾಣ ಉದ್ಘಾಟಿಸಿದ ಸಿಎಂ ಬೊಮ್ಮಾಯಿ
ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ನಿರ್ಮಿಸಿರುವ ನೂತನ ಬಸ್ ನಿಲ್ದಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಉದ್ಘಾಟಿಸಿದರು.
ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಸುಮಾರು 63.17 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಈ ಸುಸಜ್ಜಿತ ನಿಲ್ದಾಣವನ್ನು ಮುಖ್ಯಮಂತ್ರಿ ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು. ಸಚಿವರಾದ ಆರ್. ಅಶೋಕ್, ಮುನಿರತ್ನ, ಬೈರತಿ ಬಸವರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಎಂಟಿಸಿ ನಗರದ ಜನರಿಗೆ ಉತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಮುಂಬರುವ ದಿನಗಳಲ್ಲಿ ಸಾರ್ವಜನಿಕ ಸಾರಿಗೆಯಲ್ಲಿ ಬಿಎಂಟಿಸಿ ಪ್ರಮುಖ ಪಾತ್ರ ವಹಿಸಲಿದ್ದು, ಬೆಂಗಳೂರಿನ ವಾಹನ ದಟ್ಟಣೆ ಕಡಿಮೆಯಾಗುತ್ತದೆ ಎಂದರು.
ಕೋವಿಡ್ ನಿಂದಾಗಿ ಹಾಗೂ ಕೆಲವು ವರ್ಷಗಳಿಂದ ಬಿಎಂಟಿಸಿ ದರಗಳನ್ನು ಹೆಚ್ಚಿಸದ ಕಾರಣ, ಬಿಎಂಟಿಸಿ ನಷ್ಟದಲ್ಲಿದೆ. ಕಳೆದ ಎರಡು ವರ್ಷಗಳಲ್ಲಿ ಸರ್ಕಾರ 2, 915 ಕೋಟಿ ರೂ.ಗಳನ್ನು ಸಂಸ್ಥೆಗೆ ನೀಡಿರುವುದರಿಂದ ಬಿಎಂಟಿಸಿ ಸಂಸ್ಥೆಗೆ ತನ್ನ ಸೇವೆಯನ್ನು ಸಲ್ಲಿಸಲು ಸಾಧ್ಯವಾಗಿದೆ. ಬಿಎಂಟಿಸಿಗೆ 3445 ಹೊಸ ಬಸ್ ಗಳನ್ನು ಒದಗಿಸಲಾಗುತ್ತಿದೆ ಎಂದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (ಬಿಎಂಟಿಸಿ) ಕೇಂದ್ರ ಸರ್ಕಾರದ ಸಹಯೋಗದಲ್ಲಿ 1,300 ಎಲೆಕ್ಟ್ರಿಕ್ ಬಸ್‌ಗಳನ್ನು ನೀಡಲಾಗುವುದು. ಪರಿಸರ ನಾಶ ತಡೆಯಲು ಈ ಬಸ್‌ಗಳ ಅಗತ್ಯವಿದೆ ಎಂದು ಬೊಮ್ಮಾಯಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


