ರಾಜ್ಯ

ಬೆಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಸಾವು

ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದ ಸ್ಥಳದಲ್ಲಿನ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಶನಿವಾರ ಮೃತಪಟ್ಟಿದ್ದಾಳೆ.

ಬೆಂಗಳೂರು: ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಸಾವು
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೆಆರ್ ಮಾರುಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದ ಸ್ಥಳದಲ್ಲಿನ ಹೊಂಡಕ್ಕೆ ಬಿದ್ದು 6 ವರ್ಷದ ಬಾಲಕಿ ಶನಿವಾರ ಮೃತಪಟ್ಟಿದ್ದಾಳೆ. 

ಮೃತ ಮಗುವನ್ನು ಮಹೇಶ್ವರಿ ಎಂದು ಗುರುತಿಸಲಾಗಿದೆ. ಆಕೆಯ ಪೋಷಕರು ಸುಲ್ತಾನ್‌ಪೇಟೆಯ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದ ಆವರಣದಲ್ಲಿಯೇ ವಾಸಿಸುತ್ತಿದ್ದರು ಎನ್ನಲಾಗಿದೆ.

ಶುಕ್ರವಾರ ತಡರಾತ್ರಿ ಲಿಫ್ಟ್ ಅಳವಡಿಕೆಗಾಗಿ ಮಾಡಿದ್ದ ಹೊಂಡಕ್ಕೆ ಮಗು ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಂಡದಲ್ಲಿ ನೀರು ತುಂಬಿತ್ತು. ಇದನ್ನು ತಿಳಿಯದ ಮಗುವಿನ ಪೋಷಕರು ಎಲ್ಲಾ ಕಡೆ ಹುಡುಕಾಡಿದ್ದಾರೆ. ಬೆಳಗ್ಗೆ ಶವ ಹೊರ ಬಂದಾಗ ಮಾತ್ರ ಮಗು ಬಿದ್ದಿರುವ ವಿಚಾರ ತಿಳಿದುಬಂದಿದೆ.

ಕಟ್ಟಡವು ವಿಕ್ರಮ್ ಎಂಬುವವರಿಗೆ ಸೇರಿದ್ದಾಗಿದ್ದು, ಕಟ್ಟಡ ನಿರ್ಮಾಣ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಕೆ.ಆರ್. ಮಾರ್ಕೆಟ್ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.