ಉದ್ಘಾಟನೆಗೂ ಮುನ್ನವೇ ಪ್ರಯಾಣಿಕರಿಗೆ ಟೋಲ್ ಹೊರೆ; ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ನಾಳೆಯಿಂದ ಟೋಲ್ ಸಂಗ್ರಹ
ಬಹು ಉದ್ದೇಶಿತ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್ ಕೇಂದ್ರಗಳು ಸೋಮವಾರದಿಂದ ಕಾರ್ಯಾರಂಭ ಮಾಡಲಿದ್ದು, ನಾಳೆಯಿಂದಲೇ ಪ್ರಯಾಣಿಕರಿಗೆ ಭಾರಿ ಮೊತ್ತದ ಹೊರೆ ಬೀಳಲಿದೆ.

ಬೆಂಗಳೂರು: ಬಹು ಉದ್ದೇಶಿತ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್ ಕೇಂದ್ರಗಳು ಸೋಮವಾರದಿಂದ ಕಾರ್ಯಾರಂಭ ಮಾಡಲಿದ್ದು, ನಾಳೆಯಿಂದಲೇ ಪ್ರಯಾಣಿಕರಿಗೆ ಭಾರಿ ಮೊತ್ತದ ಹೊರೆ ಬೀಳಲಿದೆ.
ಹೌದು.. 117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಈ ತಿಂಗಳಾಂತ್ಯದಿಂದಲೇ ಟೋಲ್ ಸಂಗ್ರಹಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿತ್ತು. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ.
ಎರಡು ಪಥಗಳ ಸರ್ವೀಸ್ ರಸ್ತೆಗಿಲ್ಲ ಟೋಲ್
ಆರು ಪಥಗಳ ಎಕ್ಸ್‌ಪ್ರೆಸ್ ವೇನಲ್ಲಿ ಸಂಚರಿಸುವವರಿಗೆ ಈ ಟೋಲ್ ಅನ್ವಯ ಆಗಲಿದೆ. ತಲಾ ಎರಡು ಪಥಗಳ ಸರ್ವೀಸ್ ರಸ್ತೆಯಲ್ಲಿನ ಸಂಚಾರಕ್ಕೆ ಯಾವುದೇ ಟೋಲ್ ಇಲ್ಲ. ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಲಾಗಿದೆ. ನಿಯಮಿತವಾಗಿ ಪ್ರಯಾಣಿಸುವವರಿಗೆ ತಿಂಗಳ ಪಾಸ್ ಸೌಲಭ್ಯವೂ ಇದೆ.
ಇದನ್ನೂ ಓದಿ: ರೈಲಿಗೆ ಒಡೆಯರ್ ಹೆಸರು; ಸ್ವಾಗತಿಸಿದ ಯದುವೀರ್
ಬೆಂಗಳೂರು ನಗರ ಜಿಲ್ಲೆಯ ಕಣಮಿಣಕಿ ಗ್ರಾಮದ ಬಳಿ ಟೋಲ್ ನಿರ್ಮಿಸಲಾಗಿದ್ದು, ಬೆಂಗಳೂರಿನಿಂದ ಮೈಸೂರು ಕಡೆಗೆ ಪ್ರಯಾಣಿಸುವವರು ಇಲ್ಲಿ ಟೋಲ್ ಶುಲ್ಕ ಕಟ್ಟಿ ಪ್ರಯಾಣಿಸಬೇಕು. ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಬಳಿ ಇರುವ ಟೋಲ್‌ನಲ್ಲಿ ಮೈಸೂರು ಕಡೆಯಿಂದ ಪ್ರಯಾಣಿಸುವವರು ಟೋಲ್ ಕಟ್ಟಿ ಬೆಂಗಳೂರಿನತ್ತ ಬರಬಹುದು. ಈ ಕೇಂದ್ರಗಳು ತಲಾ 11 ಗೇಟುಗಳನ್ನು ಒಳಗೊಂಡಿದ್ದು, ಫ್ಯಾಶ್ ಟ್ಯಾಗ್ ಸಹಿತ ವಿವಿಧ ಸೌಲಭ್ಯಗಳನ್ನು ಒಳಗೊಳ್ಳಲಿವೆ.
ಯಾವ ವಾಹನಕ್ಕೆ ಎಷ್ಟು ಟೋಲ್ ಇಲ್ಲಿದೆ ಮಾಹಿತಿ
| ವಾಹನ ಮಾದರಿ | ಏಕಮುಖ ಸಂಚಾರ | ರಿಟರ್ನ್ ಜರ್ನಿ | ಸ್ಥಳೀಯ ವಾಹನಗಳಿಗೆ | ತಿಂಗಳ ಪಾಸ್ |
| ಕಾರ್/ಜೀಪ್/ವ್ಯಾನ್ | 135 ರೂ | 205 ರೂ | 70 ರೂ | 4,425 ರೂ |
| ಎಲ್‌ಜಿವಿ, ಎಲ್‌ಸಿವಿ, ಮಿನಿ ಬಸ್ | 220 ರೂ | 330 ರೂ | 110 ರೂ | 7,315 ರೂ |
| ಟ್ರಕ್/ಬಸ್ | 460 ರೂ | 690 ರೂ | 230 ರೂ | 15,325 ರೂ |
| 3 ಆಕ್ಸೆಲ್ ವಾಣಿಜ್ಯ ವಾಹನ | 500 ರೂ | 750 ರೂ | 250 ರೂ | 16,715 ರೂ |
| ಭಾರಿ ನಿರ್ಮಾಣ ಯಂತ್ರ/ ಬಹು ಆಕ್ಸೆಲ್ ವಾಹನಗಳು (4–6 ಆಕ್ಸೆಲ್) | 720 ರೂ | 1,080 ರೂ | 360 ರೂ | 24,030 ರೂ |
| ಅತಿ ಭಾರದ ವಾಹನಗಳು (7ಕ್ಕಿಂತ ಹೆಚ್ಚು ಆಕ್ಸೆಲ್) | 880 ರೂ | 1,315 ರೂ | 440 ರೂ | 29,255 ರೂ |
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


