ಕೆಎಸ್‌ಒಯು ಹಗರಣ: ರಾಜ್ಯಪಾಲರಿಂದ ಆದೇಶ ಬಂದರೂ ತನಿಖೆಗೆ ಒಪ್ಪಿಸಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ!
2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.

ಬೆಳಗಾವಿ: 2009-10 ಮತ್ತು 2015-16ರ ಅವಧಿಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ (ಕೆಎಸ್‌ಒಯು) ನಡೆದಿರುವ ಹಣದ ದುರುಪಯೋಗದ ಕುರಿತು ರಾಜ್ಯಪಾಲರು ತನಿಖೆಗೆ ಒಪ್ಪಿಸುವಂತೆ ಆದೇಶ ನೀಡಿದ್ದರೂ, ರಾಜ್ಯ ಸರ್ಕಾರ ಮಾತ್ರ ಇನ್ನೂ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ.
2022ರ ಏಪ್ರಿಲ್ ತಿಂಗಳಿನಲ್ಲಿ ರಾಜ್ಯಪಾಲರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರೆಂದು ತಿಳಿದುಬಂದಿದೆ.
ಫೆಬ್ರವರಿ 2022 ರಲ್ಲಿ ಕೆಎಸ್‌ಒಯು ಸಿಂಡಿಕೇಟ್ ಸಭೆ ನಡೆಸಿತ್ತು. ಚಾರ್ಟರ್ಡ್ ಅಕೌಂಟೆಂಟ್ ಮತ್ತು 2009 ರಿಂದ ಶಾಸನಬದ್ಧ ಆಡಿಟ್ ವರದಿಗಳನ್ನು ಪರಿಶೀಲಿಸಿದ ನಂತರ, ಸಿಬಿಐನಂತಹ ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ನಡೆಸುವಂತೆ ಸರ್ವಾನುಮತದಿಂದ ನಿರ್ಣಯಕೈಗೊಳ್ಳಲಾಗಿತ್ತು.
ನಿರ್ಣಯ ಹಿನ್ನೆಲೆಯಲ್ಲಿ ಫೆಬ್ರವರಿ 2020 ರಲ್ಲಿ, ಕೆಎಸ್‌ಒಯು ರಿಜಿಸ್ಟ್ರಾರ್ ಪ್ರೊ.ಆರ್.ರಾಜಣ್ಣ ಅವರು ರಾಜ್ಯಪಾಲರಿಗೆ ಪತ್ರವೊಂದನ್ನು ಬರೆದಿದ್ದರು. ದೇಶಾದ್ಯಂತ ವಿಶ್ವವಿದ್ಯಾನಿಲಯದ 205 ಸಹಯೋಗಿ ಸಂಸ್ಥೆಗಳಿಂದ ಸಂಗ್ರಹಿಸಲಾದ 250 ಕೋಟಿ ರೂಪಾಯಿಗಳ ದುರುಪಯೋಗವಾಗಿರುವುದನ್ನು ತಿಳಿಸಿದ್ದರು. ವಿಶ್ವವಿದ್ಯಾನಿಲಯದ ಪ್ರವೇಶ, ಪರೀಕ್ಷೆ, ಅಧ್ಯಯನ ಕೇಂದ್ರ ಮತ್ತು ಅಂಕಪಟ್ಟಿ ವಿಭಾಗಗಳ ರಸೀದಿಗಳಲ್ಲಿ ನಿಧಿ ದುರ್ಬಳಕೆಯಾಗಿದೆ ಎಂದು ಹೇಳಿದ್ದರು.
ಪ್ರಕರಣದ ಗಂಭೀರತೆಯನ್ನು ಮನಗಂಡ ರಾಜ್ಯಪಾಲರು, ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಏಪ್ರಿಲ್ 7, 2022 ರಂದು ಪತ್ರ ಬರೆದು ವಿವರವಾದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದರು. ಆದರೆ, ರಾಜ್ಯಪಾಲರ ಕಚೇರಿ ಪತ್ರ ಬರೆದು 10 ತಿಂಗಳು ಕಳೆದರೂ ಸರ್ಕಾರ ಇನ್ನೂ ಯಾವುದೇ ರೀತಿಯ ಕ್ರಮಕೈಗೊಂಡಿಲ್ಲ.
ಕೆಎಸ್‌ಒಯುನ ಮಾಜಿ ಉಪಕುಲಪತಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಸ್ತುತ ವಿಸಿ ಪ್ರೊ.ವಿದ್ಯಾಶಂಕರ್ ಅವರು, ಈ ಕುರಿತು ಅಧಿಕೃತ ದಾಖಲೆಗಳನ್ನು ಹಂಚಿಕೊಂಡಿದ್ದು, ಹಣ ದುರುಪಯೋಗ ಆಗಿರುವುದನ್ನು ಬಹಿರಂಗಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


