ಉಡುಪಿ: ವಾಲಿಬಾಲ್ ಆಡುವಾಗ ಹೃದಯಾಘಾತ, ಯುವಕ ಸಾವು
ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ಶನಿವಾರ ನಡೆದಿದೆ.

ಉಡುಪಿ: ವಾಲಿಬಾಲ್ ಆಡುವಾಗ ಯುವಕನೊಬ್ಬನಿಗೆ ಹೃದಯಾಘಾತವಾಗಿದ್ದು, ಈ ವೇಳೆ ಕುಸಿದು ಬಿದ್ದು ಮೃತಪಟ್ಟಿರುವ ದಾರುಣ ಘಟನೆಯೊಂದು ಕಾರ್ಕಳ ತಾಲೂಕಿನ ಕುಕ್ಕುಂದೂರಿನಲ್ಲಿ ಶನಿವಾರ ನಡೆದಿದೆ.
ಮೃತ ಯುವಕರನನ್ನು ಕುಕ್ಕುಂದೂರಿನ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ. ಐದು ವರ್ಷಗಳ ಹಿಂದೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಂತೋಷ್ ಅವರಿಗೆ ಹೃದಯಾಘಾತವಾಗಿತ್ತು. ಈ ವೇಳೆ ಚಿಕಿತ್ಸೆ ಪಡೆದುಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.
ಶನಿವಾರ ಸಂಜೆ 6.20ಕ್ಕೆ ವಾಲಿಬಾಲ್ ಆಡುತ್ತಿದ್ದಾಗ ಸಂತೋಷ್ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಉಳಿದ ಆಟಗಾರರು ಅವರನ್ನು ಕೂಡಲೇ ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಸಂಜೆ 6.35ಕ್ಕೆ ಸಂತೋಷ್ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ.
ಕುಕ್ಕುಂದೂರಿನ ದುರ್ಗಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಸಂತೋಷ್ ವಾಲಿಬಾಲ್ ಆಡುತ್ತಿದ್ದರೆಂದು ತಿಳಿದುಬಂದಿದೆ.
ಸಂತೋಷ್ ಅವರ ಸಹೋದರ-ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಕಾರ್ಕಳ ನಗರ ಪೊಲೀಸರು ಸಿಆರ್‌ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


