ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ
ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗ: ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ನೂತನ ಏರ್ಪೋರ್ಟ್ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಯಡಿಯೂರಪ್ಪ ಅವರು ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು.
ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ ಎಂದು ಹೇಳಿದರು.
ಕೊಟ್ಟ ಮಾತಿನಂತೆ ಏರ್ಪೋರ್ಟ್ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ.
ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.
ಇದೇ ವೇಳೆ ತಾವು ರಾಜ್ಯದಲ್ಲಿ ಬಿಜೆಪಿ ಕಟ್ಟಿದ ದಿನಗಳನ್ನು, ಬಿಜೆಪಿ ಆಡಳಿತವನ್ನು ಯಡಿಯೂರಪ್ಪ ಅವರು ಸ್ಮರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


