ಹಿಟ್ ಆ್ಯಂಡ್ ರನ್ ಕೇಸ್: ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಸಾವು
ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ.

ಗದಗ: ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಅಪಘಾತದಲ್ಲಿ ಮೃತಪಟ್ಟ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬರದೂರು ಬಳಿ ನಡೆದಿದೆ.
ಮುಂಡರಗಿ ಠಾಣೆಯಲ್ಲಿ ಹೆಡ್ ಕಾನ್ಸಸ್ಟೇಬಲ್ ಆಗಿದ್ದ ಕೊಟ್ರೆಪ್ಪ ಬಂಡಗಾರ (59) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಹೆಡ್ ಕಾನಸ್ಟೇಬಲ್ ಕೊಟ್ರೆಪ್ಪ ಬಂಡಗಾರ ಮುಂಡರಗಿ ತಾಲೂಕಿನ ಜಂತ್ಲಿಶೀರೂರ್ ನಿವಾಸಿಯಾಗಿದ್ದಾರೆ. ಇವರು ಮುಂಡರಗಿ ತಾಲೂಕಿನ ಡಂಬಳಕ್ಕೆ ಕರ್ತವ್ಯದ ಮೇಲೆ ಹೋಗಿದ್ದರು. ಕೆಲಸ ಮುಗಿಸಿ ರಾತ್ರಿ 12 ಗಂಟೆಯ ಮೇಲೆ ಮನೆಗೆ ಕಡೆಗೆ ತೆರಳುತ್ತಿದ್ದರು.
ಈ ವೇಳೆ ಕೊಟ್ರೆಪ್ಪ ಬಂಡಗಾರ ಅವರಿಗೆ ಅಪರಿಚಿತ ಟ್ರ್ಯಾಕ್ಟರ್ವೊಂದು ಗುದ್ದಿ ಪರಾರಿಯಾಗಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಟ್ರ್ಯಾಕ್ಟರ್ ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


