ರಾಜ್ಯ

ದಿವಂಗತ ಸುರೇಶ್ ಅಂಗಡಿಯವರ ಕನಸು ನನಸಾಗಿದೆ: ಮಂಗಳಾ ಅಂಗಡಿ

ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕನಸಿನಂತೆಯೇ ನವೀಕೃತ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಸೋಮವಾರ ಕಣ್ಣೀರಿಟ್ಟರು.

ದಿವಂಗತ ಸುರೇಶ್ ಅಂಗಡಿಯವರ ಕನಸು ನನಸಾಗಿದೆ: ಮಂಗಳಾ ಅಂಗಡಿ
ಮಂಗಳಾ ಅಂಗಡಿ
Published On :

ಬೆಳಗಾವಿ: ದಿವಂಗತ ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಕನಸಿನಂತೆಯೇ ನವೀಕೃತ ಬೆಳಗಾವಿ ರೈಲು ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದಾರೆ ಎಂದು ಸಂಸದೆ ಮಂಗಳಾ ಅಂಗಡಿ ಅವರು ಸೋಮವಾರ ಕಣ್ಣೀರಿಟ್ಟರು.

198 ಕೋಟಿ ವೆಚ್ಚದಲ್ಲಿ ಬೆಳಗಾವಿ ನಗರದಲ್ಲಿ ನವೀಕರಣಗೊಂಡ ರೈಲು ನಿಲ್ದಾಣ ಸುರೇಶ್ ಅಂಗಡಿ ಅವರ ಕನಸಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆದುಕೊಂಡು ಬಂದು ಉದ್ಘಾಟನೆ ಮಾಡುತ್ತೇನೆ ಎಂದು ಹೇಳುತ್ತಿದ್ದರು. ಈಗ ಅವರು ನಮ್ಮ ಜೊತೆ ಇಲ್ಲ ಎಂದು ಹೇಳುತ್ತಾ ಮಂಗಳಾ ಅಂಗಡಿಯವರು ಭಾವುಕರಾದರು.

ಬಳಿಕ ಇಷ್ಟರ ಮಟ್ಟಿಗೆ ಸುಸಜ್ಜಿತವಾದ ಈ ರೈಲು ನಿಲ್ದಾಣ ನವೀಕರಣಗೊಂಡಿದ್ದಕ್ಕೆ ಗುತ್ತಿಗೆದಾರರು ಹಾಗೂ ಹಿರಿಯ ಅಧಿಕಾರಿಗಳು ಹಾಗೂ ರೈಲ್ವೆ ಇಲಾಖೆ ಉದ್ಯೋಗಿಗಳಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಮೋದಿ ಅವರಿಂದ ಉದ್ಘಾಟನೆ ಕಾರ್ಯ ನೆರವೇರುತ್ತಿರುವುದು ತುಂಬಾ ಸಂತೋಷ ತಂದಿದೆ. ಸುರೇಶ್ ಅಂಗಡಿ ಅವರ ಕನಸು ನನಸಾಗುತ್ತಿದೆ ಎಂದು ಸಂಸದೆ ಹರ್ಷ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.