ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯ ವರ್ತನೆ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಬಂಧನ
ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ತುಮಕೂರು: ಮಹಿಳಾ ಪಿಎಸ್‌ಐ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್'ನ ಜಿಲ್ಲಾ ಅಧ್ಯಕ್ಷ ಶಶಿ ಹುಲಿಕುಂಟೆ ಅವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.
ತುಮಕೂರು ನಗರದ ತಿಲಕ್ ಪಾರ್ಕ್ ಮಹಿಳಾ ಪಿಎಸ್ಐ ಅವರೊಂದಿಗೆ ಅಸಭ್ಯವಾಗಿ ವರ್ತಿಸಿದ ಶಶಿ ಹುಲಿಕುಂಟೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಪೊಲೀಸರಿಗೆ ಬೆದರಿಕೆ ಹಾಕಿದ್ದಾರೆ ಎಂಬ ಸೆಕ್ಷನ್ ಅಡಿ ಬಂಧಿಸಲಾಗಿದೆ.
ಫೆ.20 ರಂದು ತುಮಕೂರು ನಗರದಲ್ಲಿ ಬಿಜೆಪಿ ಶಾಸಕ ಜ್ಯೋತಿ ಗಣೇಶ್ ವಿರುದ್ಧ, ಅವರ ಭಾವಚಿತ್ರ ಇರುವ ಪೋಸ್ಟರ್ಗಳ ಮೇಲೆ ಪೇ ಎಂಎಲ್ಎ ಎಂಬಂತಹ ಪೋಸ್ಟರ್ ಅಂಟಿಸಲಾಗಿತ್ತು. ನಿಮಗೆ ಕೆಲಸ ಆಗಬೇಕೆ, ನನಗೆ ಪೇ ಮಾಡಿ, ಭ್ರಷ್ಟಾಚಾರವೇ ನನ್ನ ಮೊದಲ ಆದ್ಯತೆ’ ಎಂದು ಬರೆದಿರುವ ಪೋಸ್ಟರ್ ಅಂಟಿಸಲಾಗಿತ್ತು.
ಇದನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಟಿಸಿದ್ದರು. ಈ ಸಂಬಂಧ ನಾಲ್ವರನ್ನು ತಿಲಕ್ ಪಾರ್ಕ್ ಪೊಲೀಸರು ಬಂದಿಸಿ ಠಾಣೆಯಲ್ಲಿ ಇಟ್ಟುಕೊಂಡಿದ್ದರು.
ಇದಕ್ಕೆ ಜಿಲ್ಲಾ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿ ಹುಲಿಕುಂಟೆ ವಿರೋಧ ವ್ಯಕ್ತಪಡಿಸಿದ ಮಹಿಳಾ ಪಿಎಸ್ಐಗೆ ಕಾರ್ಯಕರ್ತರನ್ನು ಬಿಡುಗಡೆ ಮಾಡುವಂತೆ ಒತ್ತಡ ಹಾಕಿದ್ದಾರೆ. ಇದಕ್ಕೆ ಪಿಎಸ್ಐ ಒಪ್ಪದ ಕಾರಣ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಅಲ್ಲದೆ, ಬೆದರಿಕೆಯನ್ನೂ ಹಾಕಿದ್ದಾರೆಂದು ತಿಳಿದುಬಂದಿದೆ.
3 ತಿಂಗಳು ಕಾಯಿರಿ ನಮ್ಮ ಸರ್ಕಾರ ಬರುತ್ತದೆ. ಆಗ ನಾನು ನಿಮ್ಮನ್ನು ನೋಡಿಕೊಳ್ಳುತ್ತೇನೆ ಎಂದು ಆವಾಜ್ ಹಾಕಿದ್ದಾರೆನ್ನಲಾಗಿದೆ.
ವಶಕ್ಕೆ ಪಡೆದ 4 ಜನರ ಜೇಬಿನಲ್ಲಿದ್ದ ಹಣ ಹಾಗೂ ಮೊಬೈಲನ್ನು ಕದ್ದಿದ್ದಾರೆ ಎಂದು ಠಾಣೆ ಎದುರು ಪ್ರತಿಭಟನೆ ಮಾಡುತ್ತೇನೆ ಎಂದು ಆವಾಜ್ ಹಾಕಿದ್ದಾನೆ.
ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಇದೀಗ ಶಶಿ ಹುಲಿಕುಂಟೆ ವಿರುದ್ಧ ವಿರುದ್ಧ ಐಪಿಸಿ ಸೆಕ್ಷನ್ 353, 506 ಹಾಗೂ 34ರ ಅಡಿ ಪ್ರಕರಣ ದಾಖಲಿಸಲಾಗಿದೆ. ಬಂಧನದ ಬಳಿಕ ಶಶಿ ಹುಲಿಕುಂಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


