2022ಕ್ಕೆ ಬೈ ಬೈ, 2023ಕ್ಕೆ ವೆಲ್ ಕಮ್: ದೇವಾಲಯಗಳಲ್ಲಿ ಭಕ್ತರ ಪಾರ್ಥನೆ, ಬೆಂಗಳೂರಿನಲ್ಲಿ ಪಾರ್ಟಿ, ಸಂಭ್ರಮದಲ್ಲಿ ಮಿಂದೆದ್ದ ಯುವಜನತೆ
2022ನೇ ಇಸವಿಗೆ ಗುಡ್ ಬೈ ಹೇಳಿ 2023ನೇ ಇಸವಿಗೆ ಇಂದು ಕಾಲಿಟ್ಟಿದ್ದೇವೆ. ಹೊಸ ವರ್ಷ ಅಂದ ಮೇಲೆ ಹೊಸ ಹೊಸ ಆಸೆ, ಕನಸುಗಳು ಇರುತ್ತವೆ.

ಬೆಂಗಳೂರು: 2022ನೇ ಇಸವಿಗೆ ಗುಡ್ ಬೈ ಹೇಳಿ 2023ನೇ ಇಸವಿಗೆ ಇಂದು ಕಾಲಿಟ್ಟಿದ್ದೇವೆ. ಹೊಸ ವರ್ಷ ಅಂದ ಮೇಲೆ ಹೊಸ ಹೊಸ ಆಸೆ, ಕನಸುಗಳು ಇರುತ್ತವೆ.
ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವು ಮಂದಿ ಇಂದು ನಸುಕಿನಿಂದಲೇ ದೇವಾಲಯಗಳಿಗೆ ತೆರಳಿ ಈ ವರ್ಷ ಕಷ್ಟ-ಕಾರ್ಪಣ್ಯಗಳು ದೂರಾಗಲಿ, ಕಂಡ ಕನಸು ನನಸಾಗಲಿ, ಇಷ್ಟಾರ್ಥ ನೆರವೇರಲಿ ಎಂದು ದೇವರ ಮುಂದೆ ಬೇಡಿಕೊಳ್ಳುತ್ತಿದ್ದಾರೆ. ವಿಶೇಷ ಪೂಜೆ, ಸೇವೆ ಮಾಡಿಸುತ್ತಿರುವ ದೃಶ್ಯ ಕಂಡುಬರುತ್ತಿದೆ.
ಬೆಂಗಳೂರಿನ ಇಸ್ಕಾನ್ ದೇವಾಲಯ, ಗವಿಪುರ, ಬಸವನಗುಡಿ ದೇವಾಲಯ ಸೇರಿದಂತೆ ಅನೇಕ ಕಡೆ ಭಕ್ತಾದಿಗಳ ದಂಡೇ ಆಗಮಿಸುತ್ತಿದೆ.
ಐಟಿ ಸಿಟಿ ಮೆಟ್ರೊಪಾಲಿಟನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಜೋರಾಗಿದೆ. ಯುವಜನತೆ ಹೊಸ ವರ್ಷ ಡ್ಯಾನ್ಸ್, ಪಬ್ಬು, ಪಾರ್ಟಿ ಎಂದು ಮಿಂದೆದ್ದಿದ್ದಾರೆ. ಬೆಂಗಳೂರು ನಗರದಲ್ಲಿ ಕಳೆದ ಮಧ್ಯರಾತ್ರಿ ನಡೆದ ನ್ಯೂ ಇಯರ್ ಸೆಲೆಬ್ರೇಷನ್ ದೊಡ್ಡ ದಾಖಲೆ ಎಂದೇ ಹೇಳಬಹುದು. ಪೊಲೀಸರು ನಿರೀಕ್ಷೆ ಮಾಡಿದ್ದಕ್ಕಿಂತ ಎರಡು ಪಟ್ಟು ಜನ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬ್ರಿಗೇಡ್ ರೋಡ್ , ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಅಧಿಕ ಎಂದು ಅಂದಾಜಿಸಲಾಗಿದೆ.
ಕಳೆದೆರಡು ವರ್ಷಗಳಿಂದ ಕೊರೊನಾ ಹಿನ್ನೆಲೆಯಲ್ಲಿ ವರ್ಷಾಚರಣೆಗೆ ಬ್ರೇಕ್ ಬಿದ್ದಿತ್ತು. ಈ ವರ್ಷ ಕೊರೊನಾ ರೂಪಾಂತರಿ ಆತಂಕ ಇದ್ದರೂ ನಿರ್ಬಂಧಗಳ ಜೊತೆ ಹೊಸ ವರ್ಷ ಸ್ವಾಗತಿಸಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಈ ಹಿನ್ನೆಲೆಯಲ್ಲಿ ಬ್ರಿಗೇಡ್ ರೋಡ್, ಚರ್ಚ್ ಸ್ಟ್ರೀಟ್, ಎಂ.ಜಿ ರಸ್ತೆಯಲ್ಲಿ ಜನಸಾಗರ ಸೇರಿತ್ತು. ಒಂದು ಅಂದಾಜಿನ ಪ್ರಕಾರ ಸಂಭ್ರಮಾಚರಣೆಗೆ ಬಂದ ಜನರ ಸಂಖ್ಯೆ ಸುಮಾರು 3 ಲಕ್ಷಕ್ಕೂ ಹೆಚ್ಚಿತ್ತು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


