ಮೈಸೂರು: ಮಹಿಳೆ ಬಲಿಪಡೆದು ಇಬ್ಬರ ತುಳಿದು ಗಾಯಗೊಳಿಸಿದ್ದ ಪುಂಡಾನೆ ಸೆರೆ
ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ಶನಿವಾರ 40 ವರ್ಷದ ಮಹಿಳೆಯ ಬಲಿಪಡೆದು, ತುಳಿದು ಇಬ್ಬರನ್ನು ಗಾಯಗೊಳಿಸಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮೈಸೂರು: ಹುಣಸೂರು ತಾಲೂಕಿನ ಚಿಕ್ಕಬೀಚನಹಳ್ಳಿ ಗ್ರಾಮದಲ್ಲಿ ಶನಿವಾರ 40 ವರ್ಷದ ಮಹಿಳೆಯ ಬಲಿಪಡೆದು, ತುಳಿದು ಇಬ್ಬರನ್ನು ಗಾಯಗೊಳಿಸಿದ್ದ ಪುಂಡಾನೆಯನ್ನು ಸೆರೆಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಮಹಿಳೆಯನ್ನು ಆನೆ ಬಲಿಪಡೆದುಕೊಳ್ಳುತ್ತಿದ್ದಂತಯೇ ಡಿಸಿಎಫ್ ಸೀಮಾ ನೇತೃತ್ವದಲ್ಲಿ ಅರಣ್ಯ ಸಿಬ್ಬಂದಿ ಶನಿವಾರ ಬೆಳಿಗ್ಗೆ ಶಿಬಿರದ ಆನೆಗಳಾದ ಅಭಿಮನ್ಯು, ಭೀಮ, ಮಹೇಂದ್ರ, ಗಣೇಶ್ ಮತ್ತು ಪ್ರಶಾಂತ್ ಅವರೊಂದಿಗೆ ಕೂಂಬಿಂಗ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.
ಕಾರ್ಯಾಚರಣೆಯನ್ನು ವೀಕ್ಷಿಸಲು ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ, ಸ್ಥಳದಲ್ಲಿ ಎದುರಾದ ಶಬ್ದದಿಂದ ಆನೆಯು ಗಾಬರಿಯಿಂದ ಚಿಕ್ಕ ಬೀಚನಹಳ್ಳಿ, ದೊಡ್ಡ ಬೀಚನಹಳ್ಳಿ, ಹಳ್ಳದ ಮನುಗನಹಳ್ಳಿ ಮತ್ತು ಅಕ್ಕಪಕ್ಕದ ಗ್ರಾಮಗಳ ಕೃಷಿ ಕ್ಷೇತ್ರಗಳಲ್ಲಿ ಓಡಲಾರಂಭಿಸಿತ್ತು.
ಆನೆ ಗಾಬರಿಯಿಂದ ಓಡುತ್ತಿದ್ದಂತೆ, ಆನೆಯನ್ನು ಹಿಂಬಾಲಿಸಿದ ಅರಣ್ಯಾಧಿಕಾರಿಗಳು ಮತ್ತು ಪಶುವೈದ್ಯರು ಟ್ರ್ಯಾಂಕ್ವಿಲೈಜರ್ ಡಾರ್ಟ್ ಅನ್ನು ಹೊಡೆಯಲು ವಿಫಲರಾದರು. ಆದರೆ ಮಧ್ಯಾಹ್ನ 2.30ರ ಸುಮಾರಿಗೆ ಎಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗ್ರಾಮದ ರೈತ ವಾಸು ಎಂಬುವರಿಗೆ ಸೇರಿದ ಜಮೀನಿನಲ್ಲಿ ಬೀಡು ಬಿಟ್ಟಿದ್ದ ಆನೆಗೆ ಟ್ರ್ಯಾಂಕ್ವಿಲೈಸರ್ ನ್ನು ಯಶಸ್ವಿಯಾಗಿ ನೀಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


