ಈ ಪರೀಕ್ಷೆಯ ಸಮಯದಲ್ಲಿ ಮಾಧ್ಯಮಗಳು ವಿರೋಧ ಪಕ್ಷಗಳಿಗಿಂತ ಪ್ರಮುಖ ಪಾತ್ರವನ್ನು ವಹಿಸುತ್ತವೆ: ಮಲ್ಲಿಕಾರ್ಜುನ ಖರ್ಗೆ
ಮಾಧ್ಯಮವು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನೀವು (ಮಾಧ್ಯಮ) ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡದೆ ತಪ್ಪುಗಳನ್ನು ಮಾಡಿದರೆ, ಸಮಾಜವು ಅಂತ್ಯಗೊಳ್ಳುತ್ತದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದರು.

ಬೆಂಗಳೂರು: ಮಾಧ್ಯಮವು ಪ್ರಜಾಪ್ರಭುತ್ವವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ನೀವು (ಮಾಧ್ಯಮ) ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಕಾಪಾಡದೆ ತಪ್ಪುಗಳನ್ನು ಮಾಡಿದರೆ, ಸಮಾಜವು ಅಂತ್ಯಗೊಳ್ಳುತ್ತದೆ ಎಂದು ಎಐಸಿಸಿ ಪ್ರಧಾನಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆಯವರು ಶನಿವಾರ ಹೇಳಿದರು.
ಬೆಂಗಳೂರು ಪ್ರೆಸ್ ಕ್ಲಬ್‌ನ 2022ನೇ ಸಾಲಿನ ‘ವರ್ಷದ ವ್ಯಕ್ತಿ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ‘ಪತ್ರಕರ್ತರು ಸಾಮಾಜಿಕ ನ್ಯಾಯದ ಜತೆಗೆ ಯಾವುದು ಸರಿಯಿದೆ? ಈ ದೇಶಕ್ಕೆ ಏನು ಅಗತ್ಯವಿದೆ? ಎನ್ನುವುದನ್ನೂ ಬರೆಯಬೇಕು’ ಎಂದು ಹೇಳಿದರು.
"ನಮಗಿಂತಲೂ (ವಿರೋಧ ಪಕ್ಷಗಳು), ಪ್ರಜಾಪ್ರಭುತ್ವವನ್ನು ಕಾಪಾಡುವ ಈ ಪರೀಕ್ಷೆಯ ಸಮಯದಲ್ಲಿ ಮಾಧ್ಯಮವು ಹೆಚ್ಚಿನ ಪಾತ್ರವನ್ನು ವಹಿಸುತ್ತದೆ. ಕೆಲವು ಕಾರ್ಪೊರೇಟ್ ಸೆಕ್ಟರ್'ಗಳು ಮಾಧ್ಯಮ ಸಂಸ್ಥೆ ಆರಂಭವಾದಾಗ ಸ್ವಲ್ಪ ಪಾಲನ್ನು ತೆಗೆದುಕೊಳ್ಳುತ್ತವೆ. ನಂತರ ಕ್ರಮೇಣ ಇಡೀ ಮಾಧ್ಯಮ ಸಂಸ್ಥೆಯನ್ನೇ ಖರೀದಿ ಮಾಡಿಬಿಡುತ್ತವೆ. ಆದರೆ ಸ್ವತಂತ್ರ ಪತ್ರಕರ್ತರು ಸುಮ್ಮನೆ ಕುಳಿತುಕೊಳ್ಳಬಾರದು... ಬದಲಿಗೆ ಅವರು ನೇರವಾಗಿ ಅಥವಾ ಪರೋಕ್ಷವಾಗಿ ಪತ್ರಿಕೋದ್ಯಮದ ನೀತಿಯನ್ನು ಎತ್ತಿಹಿಡಿಯಬೇಕು ಮತ್ತು ಪಟ್ಟಭದ್ರ ಹಿತಾಸಕ್ತಿಗಳಿಗೆ ಬಲಿಯಾಗಬಾರದು" ಎಂದು ತಿಳಿಸಿದರು.
ದೇಶದಲ್ಲಿ ಉದ್ಯೋಗಾವಕಾಶಗಳ ಕುರಿತು ಮಾತನಾಡಿದ ಅವರು, ರೈಲ್ವೆ, ರಕ್ಷಣೆ, ವಿಶ್ವವಿದ್ಯಾಲಯಗಳು ಮತ್ತು ಅನುದಾನಿತ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ವಲಯಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ. "ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿದರೆ, ಇದು ಕೋಟಿಗಟ್ಟಲೆ ಜನರಿಗೆ ಉದ್ಯೋಗ ಪಡೆಯಲು ಸಹಾಯ ಮಾಡುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


