ರಾಜ್ಯ

ರಾಯಚೂರು: ಮರಕ್ಕೆ ಕಟ್ಟಿ ಹಾಕಿ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ, ಬಂಧನ

ಆಘಾತಕಾರಿ ಘಟನೆಯೊಂದರಲ್ಲಿ, ರಾಯಚೂರಿನ 24 ವರ್ಷದ ಇಮ್ತಿಯಾಜ್ ಹುಸೇನ್ ಮಿಯಾ ಎಂಬಾತ ಹಸುವಿನ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಯಚೂರು: ಮರಕ್ಕೆ ಕಟ್ಟಿ ಹಾಕಿ ಕರುವಿನ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿ, ಬಂಧನ
ಪ್ರಾತಿನಿಧಿಕ ಚಿತ್ರ
Published On :

ರಾಯಚೂರು: ದೇಶದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚುತ್ತಿದ್ದರೂ, ಪ್ರಾಣಿಗಳು ಇದರಿಂದ ಹೊರತಾಗಿಲ್ಲ ಎನ್ನುವಂತಹ ಘಟನೆಗಳು ನಡೆಯುತ್ತಲೇ ಇವೆ. ಆಘಾತಕಾರಿ ಘಟನೆಯೊಂದರಲ್ಲಿ, ರಾಯಚೂರಿನ 24 ವರ್ಷದ ಇಮ್ತಿಯಾಜ್ ಹುಸೇನ್ ಮಿಯಾ ಎಂಬಾತ ಹಸುವಿನ ಕರುವಿನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯಕ್ಕಾಗಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಕೃತ್ಯ ಎಸಗುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ವರದಿಗಳ ಪ್ರಕಾರ, ಆರೋಪಿ ಕರುವನ್ನು ಮಸೀದಿ ಸಮೀಪದ ಕೃಷಿ ಜಮೀನಿನಲ್ಲಿ ಮರಕ್ಕೆ ಕಟ್ಟಿ ಹಾಕಿದ್ದ. ಆರೋಪಿ ವಿರುದ್ಧ ಹಸುವಿನ ಮಾಲೀಕರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಪ್ರಾಥಮಿಕ ತನಿಖೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂತದ್ದೇ ಪ್ರಕರಣವೊಂದರಲ್ಲಿ ಗರ್ಭಿಣಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 29 ವರ್ಷದ ಪ್ರದ್ಯುತ್ ಭೂಯಾ ಎಂಬ ವ್ಯಕ್ತಿಯನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದರು.

ಈ ಹಿಂದೆ, ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಸಮೀಪದ ಗೆಜ್ಜಲಗೆರೆ ಗ್ರಾಮದ ಮಂಜುನಾಥ್ ಎಂಬ 34 ವರ್ಷದ ನಿವಾಸಿ ಕೂಡ ಹಸುಗಳೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಕ್ಕಾಗಿ ಬಂಧನಕ್ಕೀಡಾಗಿದ್ದನು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.